ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಕಾಮಗಾರಿಗೆ ಇಂದು ಸಚಿವ ಗಡ್ಕರಿ ಚಾಲನೆ

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯುವ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು ₹ 6975 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. 

Union Minister Nitin Gadkari Drive the Construction work of National Highways in Karnataka grg

ಬೆಳಗಾವಿ(ಫೆ.22): ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಕಲಬುರಗಿ, ಬೀದರ ಈ ಎಲ್ಲ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು ₹ 6975 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಫೆ. 22 ರಂದು ಮಧ್ಯಾಹ್ನ 12 ಗಂಟೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ₹1622.04 ಕೋಟಿ ವೆಚ್ಚದಲ್ಲಿ 34.48 ಕಿಮೀ ಉದ್ದದ 4/6 ಪಥದ ವರ್ತುಲ್ (ರಿಂಗ್) ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 548 ಬಿ ಚಿಕ್ಕೋಡಿ ಬೈಪಾಸ್‌ನಿಂದ -ಗೋಟೂರುವರೆಗೆ ₹941.61 ಕೋಟಿ ವೆಚ್ಚದಲ್ಲಿ 27.12 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ, ಶಿರಗುಪ್ಪಿಯಿಂದ ಅಂಕಲಿವರೆಗೆ ₹ 887.32 ಕೋಟಿ ವೆಚ್ಚದಲ್ಲಿ 10 ಕಿ.ಮೀ ಉದ್ದದ ರಸ್ತೆ ಅಗಲೀಕರಣ, ಮುರಗುಂಡಿಯಿಂದ ಚಿಕ್ಕೋಡಿ ಹತ್ತಿರವರೆಗೆ ₹785.79 ಕೋಟಿ ವೆಚ್ಚದಲ್ಲಿ 50.2 ಕಿ.ಮೀ ಉದ್ದದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ಸಿಗಲಿದೆ. ಒಟ್ಟು ಬೆಳಗಾವಿ ಜಿಲ್ಲೆಯಲ್ಲಿ ₹ 4237.12 ಕೋಟಿ ವೆಚ್ಚದ 121.8 ಕಿ.ಮೀ ಉದದ್ದ ರಸ್ತೆಗಳನ್ನು ಒಳಗೊಂಡಿದೆ ಎಂದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿ

ವಿಶೇಷ ವಿಮಾನದ ಮೂಲಕ ಆಗಮನ:

22 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಂದು ಮಧ್ಯಾಹ್ನ 12 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯುವ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು ₹ 6975 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 2 ಗಂಟೆಗೆ ಸಾಂಬ್ರಾ ವಿಮಾನದಿಂದ ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು.

Latest Videos
Follow Us:
Download App:
  • android
  • ios