'ರೆಮಿಡಿಸಿವರ್ ಕೊರತೆಯಾಗಿದೆ ಎಂದು ಗಾಬರಿ ಹುಟ್ಟಿಸುವ ಕೆಲಸವಾಗುತ್ತಿದೆ'
ರೆಮಿಡಿಸಿವರ್ ಹಾಗೂ ಆಕ್ಸಿಜನ್ ಕೊರತೆ ಇಲ್ಲದೇ ಕೊರೋನಾ ಸೋಂತಿರು ಸಾವನ್ನಪ್ಪುತ್ತಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು ಹೀಗೆ
ಧಾರವಾಡ, (ಏ.24): ಕೋವಿಡ್ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ.ಆದರೆ ಜನರು ಜಾಗೃತರಾಗಬೇಕು. ರೆಮಿಡಿಸಿವರ್ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕೋವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಅಂಬ್ಯುಲೆನ್ಸ್ ಸಿದ್ದ ಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು, ಆದ್ರೆ ಭಯಪಡುವ ಅಗತ್ಯವಿಲ್ಲ. ಅನಗತ್ಯವಾಗಿ ಜನರು ರಸ್ತೆಯಲ್ಲಿ ಓಡಾಡುವುದು ಬೇಡ. ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಅನಿರೀಕ್ಷಿತವಾಗಿ ಬಂದ ಈ ತುರ್ತು ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಿದೆ ಎಂದು ಹೇಳಿದರು.
ರೆಮ್‌ಡಿಸಿವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ..!
ಜನರು ಅಗತ್ಯಕ್ಕಿಂತಲೂ ಹೆಚ್ಚು ಭಯ ಭೀತಿ ಗೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಅಗತ್ಯ ವಾಕ್ಸಿನ್ ಪೂರೈಕೆ ಮಾಡುತ್ತಿದೆ. ರೆಮಿಡಿಸಿವರ್ ಅಂತಿಮ ಪರಿಹಾರವಲ್ಲ. ರೆಮಿಡಿಸಿವರ್ ಕೊರತೆಯಾಗಿದೆ ಎಂದು ಗಾಬರಿ ಹುಟ್ಟಿಸುವ ಕೆಲಸವಾಗುತ್ತಿದೆ ಎಂದು ತಿಳಿಸಿದರು.
ಇನ್ನೂ ದೊಡ್ಡ ನಗರಗಳಲ್ಲಿ ಆಕ್ಸಿಜನ್ ಕೊರತೆಯಾಗಿದ್ದು ನಿಜ, ಆದರೆ ಏರ್ ಲಿಪ್ಟಿಂಗ್, ರೈಲ್ವೇ ಮೂಲಕ ಆಕ್ಸಿಜನ್ ಪೂರೈಸುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ ಎಂದು ಸಮಜಾಯಿಷಿ ನೀಡಿದರು.
ಕರ್ನಾಟಕದ ವಿಚಾರದಲ್ಲೂ ಕೇಂದ್ರ ಮುತುವರ್ಜಿ ವಹಿಸಿದೆ. ಆರೋಗ್ಯ ಸಚಿವರು ನಿರಂತರವಾದ ಸಮರ್ಪಕದಲ್ಲಿದ್ದಾರೆ. ಬಳ್ಳಾರಿಯಿಂದ ಪೂರೈಕೆಯಾಗುವ ಆಕ್ಸಿಜನ್ ಬಗ್ಗೆ ಮಾತುಕತೆ ನಡೆದಿದೆ. ಆಕ್ಸಿಜನ್ ಸಿಗುವುದಿಲ್ಲ ಎಂದು ಯಾರು ಭಯಪಡಬೇಡಿ . ಇಂದಿನಿಂದ ಕೇಂದ್ರ ಸರ್ಕಾರ, ರಾಜ್ಯಕ್ಕೆ ಆಕ್ಸಿಜನ್ ಹಂಚಿಕೆ ಜಾಸ್ತಿಮಾಡಿದೆ ಎಂದರು.