ಕಳಸಾ ಬಂಡೂರಿ ಯೋಜನೆ ಫಾರೆಸ್ಟ್ ಕ್ಲಿಯರೆನ್ಸ್‌ಗೆ ದೆಹಲಿಗೆ ಹೋಗುವ ಅಗತ್ಯವಿಲ್ಲ: ಪ್ರಹ್ಲಾದ್ ಜೋಶಿ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಲು ಫಾರೆಸ್ಟ್ ಕ್ಲಿಯರೆನ್ಸ್‌ಗೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Union Minister Pralhad Joshi Talks Over Mahadayi Water Project gvd

ಬೆಂಗಳೂರು (ಡಿ.31): ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಲು ಫಾರೆಸ್ಟ್ ಕ್ಲಿಯರೆನ್ಸ್‌ಗೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಎರಡು ತಿಂಗಳಲ್ಲಿ ಯೋಜನೆ ಶಂಕು ಸ್ಥಾಪನೆ ಕೂಡ ನೆರವೇರಿಸಲಿದ್ದು, ಸಿದ್ದರಾಮಯ್ಯ, ಎಚ್.ಕೆ ಪಾಟೀಲ್ ಅವರು ಅನಗತ್ಯ ಆರೋಪ ಮಾಡ್ತಿದ್ದಾರೆ ಎಂದರು. 

ಸಿದ್ಧರಾಮಯ್ಯ, ಎಚ್.ಕೆ ಪಾಟೀಲ್ ಅವರು ಪೊಲಿಟಿಕಲಿ ಔಟ್ ಡೇಟೆಡ್ ಆಗ್ತಿದ್ದಾರೆ. ಹೀಗಾಗಿ ಅವರು ಡೇಟ್ ಬಗ್ಗೆ ಕೇಳ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಕಳಸಾ ಭಂಡೂರಿ ಯೋಜನೆ ಡಿಪಿಆರ್‌ಗೆ ಅನುಮತಿ ನೀಡಿದೆ. ಯೋಜನೆ ಆರಂಭಿಸಲು ಫಾರೆಸ್ಟ್ ಕ್ಲಿಯರೆನ್ಸ್ ರಾಜ್ಯ ಸರ್ಕಾರದ ಮಟ್ಟದಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.  ಫಾರೆಸ್ಟ್ ಕ್ಲಿಯರೆನ್ಸ್ ಬಗ್ಗೆ ಈಗಾಗಲೇ ತಜ್ಞರು ಹಾಗೂ ಅಧಿಕಾರಿಗಳ ಜೊತೆ ನಾನು ಚರ್ಚಿಸಿದ್ದೇನೆ. 

ಜ.12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ತಜ್ಞರು ನೀಡಿರುವ ಖಚಿತ ಮಾಹಿತಿಯ ಪ್ರಕಾರ ಕಳಸಾ ಬಂಡೂರಿ ಎರಡು ಕಾಮಗಾರಿಗಳಿಗೆ ಒಟ್ಟು 65 ಎಕರೆಯಷ್ಟು ಅರಣ್ಯ ಭೂಮಿ ಬೇಕಾಗುತ್ತದೆ. ಮುಂದುವರಿದ ತಂತ್ರಜ್ಞಾನದಿಂದ ಅತಿ ಕಡಿಮೆ ಮರಗಿಡಗಳನ್ನು ಕಡಿಯಲು ಯೋಜಿಸಲಾಗಿದೆ. 65 ಎಕರೆ ಮಾತ್ರ ಅರಣ್ಯ ಬೇಕಾಗಿರುವುದರಿಂದ ರಾಜ್ಯ ಸರ್ಕಾರವೇ ಫಾರೆಸ್ಟ್ ಕ್ಲಿಯರೆನ್ಸ್ ಕೊಡಬಹುದಾಗಿದೆ. ಫಾರೆಸ್ಟ್ ಕ್ಲಿಯರೆನ್ಸ್ ಗಾಗಿ ಕೇಂದ್ರ ಸರ್ಕಾರ ಬಳಿ ಹೋಗುವ ಅಗತ್ಯವಿಲ್ಲ ಎಂದು ತಜ್ಞರು ಖಚಿತವಾಗಿ ಹೇಳಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಹಾಗೂ ಎಚ್.ಕೆ ಪಾಟೀಲ್ ಅವರು ಅನಗತ್ಯವಾಗಿ ಆರೋಪ ಮಾಡ್ತಿದ್ದಾರೆ.

ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಫಾರೆಸ್ಟ್ ಕ್ಲಿಯರೆನ್ಸ್ ತೆಗೆದುಕೊಳ್ಳುವುದು ಕಷ್ಟವಾಗುವುದಿಲ್ಲ. ರಾಜ್ಯ ಸರ್ಕಾರದ ಮಟ್ಟದಲ್ಲೇ ಫಾರೆಸ್ಟ್ ಕ್ಲಿಯರೆನ್ಸ್ ತೆಗೆದುಕೊಳ್ಳಲು ಅವಕಾಶ ಇರುವುದರಿಂದ ಆದಷ್ಟು ಬೇಗ ಫಾರೆಸ್ಟ್ ಕ್ಲಿಯರೆನ್ಸ್ ಪಡೆದು ಯೋಜನೆ ಆರಂಭಿಸುತ್ತೇವೆ. ಎರಡು ತಿಂಗಳಲ್ಲೇ ಶಂಕು ಸ್ಥಾಪನೆ ಕೂಡ ನೆರವೇರಿಸುವ ವಿಶ್ವಾಸವನ್ನ ಪ್ರಲ್ಹಾದ್ ಜೋಶಿ ಇದೆ ವೇಳೆ ವ್ಯಕ್ತಪಡಿಸಿದರು. 

ಮಹದಾಯಿ ಬಗ್ಗೆ ಮಾತಾಡಲು ಕಾಂಗ್ರೆಸ್‌ನವರಿಗೆ ನೈತಿಕತೆಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಇನ್ನು ಕುಮಾರಸ್ವಾಮಿ ಅವರ ಎಟಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿ ವಚನ ಭ್ರಷ್ಟರು. ಅವರು ದೇಶಕ್ಕಾಗಿ ಸಮಾಜಕ್ಕಾಗಿ ಏನನ್ನು ಮಾಡುವವರಲ್ಲ. ತಂದೆ ಮಗನಿಗಾಗಿ, ಮಗ ಹೆಂಡತಿಗಾಗಿ, ಹೆಂಡತಿ ಮಗನಿಗಾಗಿ ರಾಜಕೀಯ ಮಾಡುವವರು. ಇಂಥವರಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದರು.

Latest Videos
Follow Us:
Download App:
  • android
  • ios