Asianet Suvarna News Asianet Suvarna News

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿನ ಡೋರ್‌ಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು!

ಲೋಕಸಭಾ ಚುನಾವಣೆ ಕಾರ್ಯದಲ್ಲಿ ತೊಡಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಡೋರ್ ತೆಗೆದಾಗ ಅದಕ್ಕೆ ಡಿಕ್ಕಿ ಹೊಡೆದ ಬಿಜೆಪಿ ಕಾರ್ಯಕರ್ತ ಕೆಳಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Union Minister Shobha Karandlaje car door collided with BJP worker death sat
Author
First Published Apr 8, 2024, 2:40 PM IST

ಬೆಂಗಳೂರು (ಏ.08): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ, ರಸ್ತೆ ಬದಿಗೆ ಕಾರು ನಿಲ್ಲಿಸಿ ಡೋರ್ ತೆಗೆಯುತ್ತಿದ್ದಂತೆ ಕಾರನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತ ಡೋರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಆದರೆ, ಕೆಳಗೆ ಬಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೆ ಬರುತ್ತಿದ್ದ ಖಾಸಗಿ ಬಸ್ ಕೂಡ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಕೆ.ಆರ್. ಪುರದ ಬೈಕ್‌ ಸವಾರ ಬಿಜೆಪಿ ಕಾರ್ಯಕರ್ತ ಪ್ರಕಾಶ್ (35) ಎಂದು ಗುರುತಿಸಲಾಗುದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾರು ಚಾಲಕ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಬಂದು ಪಕ್ಕದಲ್ಲಿನ ಡೋರ್ ತೆಗೆದಿದ್ದಾನೆ. ಆಗ, ಡೋರ್ ಓಪನ್‌ ಆಗುತ್ತಿದ್ದಂತೆ ಕಾರಿನ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಪ್ರಕಾಶ್‌ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.

ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿಯ ಅಪ್ಪನಿಗಿಂದ ಒಂದು ವೋಟು ಜಾಸ್ತಿನೇ ಲೀಡ್ ಕೊಡಿಸ್ತೇನೆ: ಪ್ರೀತಂ ಗೌಡ ವಾಗ್ದಾನ

ಕಾರಿನ ಡೋರ್‌ ತಗುಲಿ ಕೆಳಗೆ ಬಿದ್ದ ಬೈಕ್‌ ಸವಾರನಿಗೆ ಅವರ ಹಿಂದೆಯೇ ಬರುತ್ತಿದ್ದ ಖಾಸಗಿ ಬಸ್‌ ಕೂಡ ಡಿಕ್ಕಿ ಹೊಡೆದಿದೆ. ಇದರಿಂಗ ಬಿಜೆಪಿ ಕಾರ್ಯಕರ್ತ ಪ್ರಕಾಶ್‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಾರ್ಯಕರ್ತರು ಎತ್ತಿಕೊಂಡು ಆಟೋದಲ್ಲಿ ಕೂಡಿಸಿಕೊಂಡು ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವರು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ, ಪೊಲೀಸ್‌ ತನಿಖೆಯಿಂದ ಪೂರ್ಣ ಮಾಹಿತಿ ಲಭ್ಯವಾಗಲಿದೆ.

ಬಿಜೆಪಿ ಕಾರ್ಯಕರ್ತನ ಮೃತದೇ ವೀಕ್ಷಣೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು,  ನಮ್ಮ ಕಾರಿಗೆ ಡಿಕ್ಕಿ ಹೊಡೆದು ಮೃತಪಟ್ಟವರು ಬಿಜೆಪಿ ಕಾರ್ಯಕರ್ತ ಪ್ರಕಾಶ್‌. ಕಾರ್ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಸಾವನ್ನಪ್ಪಿದ್ದಾರೆ . ಅಚಾನಕಕ್ಕಾಗಿ ಈ ಅವಘಡ ಸಂಭವಿಸಿದೆ.  ಅವರ ಕುಟುಂಬದ ಜೊತೆ ನಾವಿದ್ದೇವೆ, ಎಲ್ಲ ಸವಲತ್ತುಗಳನ್ನು ಮಾಡಿಕೊಂಡುತ್ತೇವೆ . ಅಪಘಾತವಾದ ಕಾರ್  ನನ್ನದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಕರ್ನಾಟಕಕ್ಕೆ ಬರ ಪರಿಹಾರ ನಿರ್ಲಕ್ಷ್ಯ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ಮೃತ ಪ್ರಕಾಶನ ತಂಗಿ ಶಾಂತ ಮೇರಿ ಮಾತನಾಡಿ, ಮೃತ ಪ್ರಕಾಶ್ ಬಿಜೆಪಿ ಮೀಟಿಂಗ್ ಇದೆ ಎಂದು ಹೋಗಿದ್ದು, ಅಲ್ಲಿಂದ ವಾಸ್ ಬರುತ್ತಿರುವ ವೇಳೆ ಅವಘಡ ಸಂಭವಿಸಿದೆ. 65 ವರ್ಷದ ಪ್ರಕಾಶನಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಆದರೆ, ಕಾರು ಡಿಕ್ಕಿ ಹೊಡೆದು ಸತ್ತಿದ್ದಾರೆ. ರೋಗ ಬಂದು ಸತ್ತಿದಿದ್ದರೆ ಪರವಾಗಿಲ್ಲ ಆದರೆ ಕಾರ್ ಅಪಘಾತದಲ್ಲಿ ಸತ್ತಿದ್ದಾರೆ. ಇನ್ನು ನಮ್ಮ ಕುಟುಂಬಕ್ಕೆ ದಿಕ್ಕು ಯಾರು ತಂಗಿ ಶಾಂತ ಮೇರಿ ಅಳಲು ತೋಡಿಕೊಂಡಿದ್ದಾರೆ.

Follow Us:
Download App:
  • android
  • ios