ಗೋಹತ್ಯೆ ಮುಂದುವರಿದರೆ ರಾಜ್ಯದಲ್ಲಿ ಅಶಾಂತಿ ಖಚಿತ: ಕಟೀಲ್‌

ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಗೋಹತ್ಯೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಅಶಾಂತಿ ಖಂಡಿತ ಎಂದು ಎಚ್ಚರಿಕೆ ನೀಡಿದ್ದಾರೆ

Unrest in state if cow slaughter continues Kateel warns to govt at mangaluru rav

ಮಂಗಳೂರು (ಜೂ.28): ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಗೋಹತ್ಯೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಅಶಾಂತಿ ಖಂಡಿತ ಎಂದು ಎಚ್ಚರಿಕೆ ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕೃತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋಸಂರಕ್ಷಣೆಯ ಉದ್ದೇಶಕ್ಕೆ ಬಿಜೆಪಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿತ್ತು. ಮಹಾತ್ಮಗಾಂಧಿಯೂ ಗೋ ಸಂರಕ್ಷಣೆ ಆಗಬೇಕು ಎಂದು ಹೇಳಿದ್ದರು. ಕೆಲವು ಆಚರಣೆಯ ವೇಳೆ ಗೋಹತ್ಯೆ ಆಗುತ್ತದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದು, ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋಹತ್ಯೆಗೆ ಅವಕಾಶ ನೀಡಬಾರದು. ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದರೆ ತೀವ್ರ ಹೋರಾಟ:  ಶಂಕರಮಠದ  ಚಂದ್ರಶೇಖರ ಸ್ವಾಮೀಜಿ ಎಚ್ಚರಿಕೆ

ಗೋಹತ್ಯೆ ವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ(Priyank kharge ITBT minister) ಅವರು ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗೋಹತ್ಯೆ ವಿರುದ್ಧ ಕಠಿಣ ಕ್ರಮಕ್ಕೆ ನಳಿನ್‌ ಕುಮಾರ್‌ ಕಟೀಲ್‌ ಆಗ್ರಹ

ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಇಲ್ಲದ್ದಿರೆ ಅಶಾಂತಿ ಖಂಡಿತ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಒಂಭತ್ತು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೂತ್‌ ಕಾರ್ಯಕರ್ತರೊಂದಿಗೆ ಕದ್ರಿಯ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಮಂಗಳವಾರ ‘ನನ್ನ ಬೂತ್‌, ಎಲ್ಲಕ್ಕಿಂತ ಬಲಿಷ್ಠ ಬೂತ್‌’ ಕುರಿತ ನೇರ ಸಂವಾದ ಕಾರ್ಯಕ್ರಮ ವೀಕ್ಷಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುವ ಪ್ರಸ್ತಾಪ ಉಲ್ಲೇಖಿಸಿದ ಅವರು, ದೇಶದಲ್ಲಿ ಗೋ ಸಂಸ್ಕೃತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋಸಂರಕ್ಷಣೆಯ ಉದ್ದೇಶಕ್ಕೆ ಬಿಜೆಪಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿತ್ತು. ಮಹಾತ್ಮ ಗಾಂಧಿಯೂ ಗೋ ಸಂರಕ್ಷಣೆ ಆಗಬೇಕು ಎಂದು ಹೇಳಿದ್ದರು ಎಂದರು.

ಕೆಲವು ಆಚರಣೆಯ ವೇಳೆ ಗೋ ಹತ್ಯೆ ಆಗುತ್ತದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದು, ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆಗೆ ಅವಕಾಶ ನೀಡಬಾರದು. ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

slaughter house: ಕಸಾಯಿಖಾನೆ ಹೊರಗೆ ಪ್ರಾಣಿ ವಧೆ ನಿಷೇಧಿಸಿದ ಬಿಬಿಎಂಪಿ

ಗೋಹತ್ಯೆವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಳಿನ್‌ ಕುಮಾರ್‌ ಆಗ್ರಹಿಸಿದರು.

ಈ ಸಂದರ್ಭ ಶಾಸಕ ವೇದವ್ಯಾಸ್‌ ಕಾಮತ್‌, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಮತ್ತಿತರರಿದ್ದರು.

 

Latest Videos
Follow Us:
Download App:
  • android
  • ios