ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲದ ಜಯೇಶ ಪೂಜಾರಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ 2023, ಜ.14ರಂದು ಕರೆ ಮಾಡಿ .100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಒಂದು ವೇಳೆ ಕೊಡದಿದ್ದರೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

 ಬೆಳಗಾವಿ (ಜು.16): ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಗ್ಪುರ ಎಟಿಎಸ್‌ ಪೊಲೀಸರು ವಶದಲ್ಲಿರುವ ಜಯೇಶ್‌ ಪೂಜಾರಿ, ಉಗ್ರರೊಂದಿಗೆ ನಂಟು ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ ಬೆಳಗಾವಿ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆಯೇ ರಾಜ್ಯ ಪೊಲೀಸ್‌ ಅಧಿಕಾರಿಗಳು ಕಾರಾಗೃಹದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಕಳೆದ ಮೂರು ದಿನಗಳ ಹಿಂದಷ್ಟೆಅಂದರೆ ಜು.12 ರಂದು ಮಹಾರಾಷ್ಟ್ರದ ನಾಗ್ಪುರ ಎಟಿಎಸ್‌ ಪೊಲೀಸರು(ATS Police) ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ(Belgaum Hindalaga Central Jail)ಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಜು.14ರಂದು ಎನ್‌ಐಎ ಅಧಿಕಾರಿಗಳು(NIA officers) ದಿಢೀರ್‌ ಭೇಟಿ ನೀಡಿ ಉಗ್ರ ಅಪ್ಸರ್‌ ಪಾಷಾನನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದಿದ್ದಾರೆ. ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಕರೆ(Threatening call to Union Minister Nitin Gadkari) ಹೋಗಿರುವುದು ಹಿಂಡಲಗಾ ಕೇಂದ್ರ ಕಾರಾಗೃಹದಿಂದ. ಆದರೆ ಉಗ್ರ ಅಪ್ಸರ್‌ ಪಾಷಾ ಕೂಡ ಇದೇ ಜೈಲಿನಲ್ಲಿರುವುದರಿಂದ ಈತನ ಬೆಂಬಲದಿಂದಲೇ ಫೋನ್‌ ಮಾಡಿರಬಹುದು ಶಂಕೆ ಎನ್‌ಐಎ ಅಧಿಕಾರಿಗಳಿಗೆ ಲಭ್ಯವಾಗಿದ್ದರಿಂದ ಬೆಳಗಾವಿ ಕಾರಾಗೃಹ ಭೇಟಿ ನೀಡಿದ್ದರು. ಗಡ್ಕರಿಗೆ ಬೆದರಿಕೆ ನೀಡಿದ ಪ್ರಕರಣದ ತನಿಖೆ ವೇಳೆ ಜಮ್ಮು​ ಕಾಶ್ಮೀರದಲ್ಲಿ ಲಷ್ಕರ್‌ ​ಎ- ​ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಜಯೇಶ ಪೂಜಾರಿ ಸಂಪರ್ಕದಲ್ಲಿದ್ದ ಹಾಗೂ ಅವರಿಗೆ ಸಹಾಯ ಮಾಡಿದ್ದ ಕೇಸಲ್ಲಿ ಬಂಧಿತನಾಗಿರುವ ಪಾಷಾ ಜತೆ ಪೂಜಾರಿ ಸಂಪರ್ಕದಲ್ಲಿದ್ದಾನೆ ಎನ್ನಲಾಗಿದೆ. 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲೂ ಈ ಪಾಷಾ ಭಾಗಿಯಾಗಿದ ಆರೋಪವಿದೆ.

ಬೆಳಗಾವಿ ಜೈಲಿಂದಲೇ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಕರೆ: ಬೆದರಿಕೆ ಹಿಂದಿದೆ ಲಷ್ಕರ್‌ ಉಗ್ರರ ನಂಟು!

ಎನ್‌ಐಎ ಅಧಿಕಾರಿಗಳು ಭೇಟಿ ನೀಡಿದ ವೇಳೆಯೇ ರಾಜ್ಯ ಪೊಲೀಸ್‌ ಅಧಿಕಾರಿಗಳು ಹಿಂಡಲಗಾ ಜೈಲಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹೊರಗೆ ವಿವಿಧ ಅಪರಾಧಿಕ ಕೃತ್ಯದಲ್ಲಿ ತೊಡಗಿದವರನ್ನು ಹಿಡಿಯಲು ಪೊಲೀಸರು ಹರಹಾಸ ಪಡುತ್ತಾರೆ. ಕೊನೆಗೆ ವಿವಿಧ ಕಡೆಗಳಲ್ಲಿ ಕುಟುಂಬ, ಊರು ನಿದ್ರೆ, ಊಟವನ್ನೇ ಬಿಟ್ಟು ಆರೋಪಿಗಳ ಪತ್ತೆಗೆ ಅಲೆದಾಡಿ, ಕೊನೆಗೆ ಜೀವದ ಹಂಗು ತೊರೆದು ಆರೋಪಿಯನ್ನು ಹಿಡಿದು ಜೈಲಿಗೆ ಕಳುಹಿಸುತ್ತೇವೆ. ಆದರೆ ಜೈಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ವೈಫಲ್ಯದಿಂದಾಗಿ ಹಾಗೂ ಕೈದಿಗಳ ಬಳಿ ಮೊಬೈಲ್‌, ಚಾರ್ಜರ್‌ಗಳು ಪತ್ತೆಯಾಗುತ್ತಿವೆ. ಕಾರಾಗೃಹದ ಸಿಬ್ಬಂದಿಯ ಎಡವಟ್ಟುಗಳು ಇಂತಹ ಘಟನೆಗಳು ನಡೆಯುವಂತಾಗುತ್ತವೆ ಎಂದು ಹಿಂಡಲಗಾ ಅಧಿಕಾರಿಗಳ ವಿರುದ್ಧ ತೀವ್ರ ಕೆಂಡಕಾರಿದ್ದಾರೆ. ಪೊಲೀಸ್‌ ಅಧಿಕಾರಿಗಳ ತೀವ್ರ ತರಾಟೆಯಿಂದಾಗಿ ಮೆತ್ತಗಾದ ಹಿಂಡಲಗಾ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲ ಸಮಯ ಮೌನಕ್ಕೆ ಶರಣಾಗಿದ್ದಾರೆ. ಬಳಿಕ ಅಧಿಕಾರಿಗಳ ಬಳಿ ವಿಷಾಧ ವ್ಯಕ್ತಪಡಿಸಿ, ಹೆಚ್ಚಿನ ನಿಗಾವಹಿಸುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಜ.14ರಂದು ಕೊಲೆ ಬೆದರಿಕೆ ಹಾಕಿದ್ದ ಆರೋಪಿ:

ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲದ ಜಯೇಶ ಪೂಜಾರಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ 2023, ಜ.14ರಂದು ಕರೆ ಮಾಡಿ .100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಒಂದು ವೇಳೆ ಕೊಡದಿದ್ದರೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಈ ಕುರಿತು ಮಹಾರಾಷ್ಟ್ರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿದ್ದರಿಂದ ಈ ಕರೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಂದಿರುವುದು ಎಂದು ಖಚಿತಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು.

ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಉಗ್ರರ ನಂಟು?

ಆದರೆ ಈ ಘಟನೆ ಮಾಸುವ ಮುನ್ನವೇ 2023, ಮಾ.21ರಂದು ಎರಡನೇ ಬಾರಿಗೆ ಜಯೇಶ್‌ ಕಾಂತಾ ಅಲಿಯಾಸ್‌ ಜಯೇಶ್‌ ಪೂಜಾರಿ ಎಂಬಾತನ ಹೆಸರಿನಲ್ಲಿ ಮಹಾರಾಷ್ಟ್ರದ ನಾಗ್ಪುರದ ನಿತಿನ್‌ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿ .10 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೀಗ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಸಲ್ಲಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಜಯೇಶ್‌ ಪೂಜಾರಿ ಇರುವ ಹಿಂಡಲಗಾ ಕಾರಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಲ್ಲಿನ ಸಿಬ್ಬಂದಿ ಹಾಗೂ ಆತನೊಂದಿಗೆ ಸಂಪರ್ಕದಲ್ಲಿರುವ ಬೇರೆ ಕೈದಿಗಳಿಂದ ಆತನ ಕುರಿತು ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಮರಳಿದ್ದರು. ಇದೀಗ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.