ಬೆಂಗಳೂರು [ಡಿ.20]:  ಮಂಗಳೂರಿನಲ್ಲಿ ನಡೆದ ಘಟನೆಗೆ ಕಾಂಗ್ರೆಸ್‌ ಶಾಸಕ ಹಾಗೂ ಮಾಜಿ ಸಚಿವ ಯು.ಟಿ.ಖಾದರ್‌ ಅವರೇ ನೇರ ಹೊಣೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಆಪಾದಿಸಿದ್ದಾರೆ.

ಈ ಬಗ್ಗೆ ಗುರುವಾರ ತಡರಾತ್ರಿ ಟ್ವೀಟ್‌ ಮಾಡಿರುವ ಅವರು, ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಮತ್ತು ಇಬ್ಬರ ಸಾವಿನ ಘಟನೆಗೆ ಯು.ಟಿ.ಖಾದರ್‌ ಅವರೇ ನೇರ ಜವಾಬ್ದಾರಿ ಎಂದು ಆರೋಪಿಸಿದ್ದಾರೆ. 

ಕರ್ನಾಟಕದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾದಲ್ಲಿ ಇಡೀ ರಾಜ್ಯವೇ ಹೊತ್ತಿ ಉರಿಯಲಿದೆ ಎಂದು ಖಾದರ್‌ ಹೇಳಿದ್ದರು. ಆ ಹೇಳಿಕೆ ಬೆನ್ನಲ್ಲೇ ಬಿಜೆಪಿಯ ಅನೇಕ ಮುಖಂಡರು ಖಾದರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯ ಹೊತ್ತಿ ಉರಿಯುತ್ತೆ ಎಂದಿದ್ದ ಶಾಸಕ ಖಾದರ್ ವಿರುದ್ಧ ದೂರು..

ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿದ್ದು, ಸಂಪೂರ್ಣ ಕರಾವಳಿ ಉದ್ವಿಗ್ನವಾಗಿದೆ. ಈಗಾಗಲೇ ಇಲ್ಲಿ ಕರ್ಫ್ಯೂ ಹೇರಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.