* ತಿಂಗಳುಗಳ ಬಳಿಕ ಸಿಎಂ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡ ಸಂಸದ ಅನಂತ್ ಕುಮಾರ್ ಹೆಗಡೆ*  ಅನಾರೋಗ್ಯದಿಂದ ಇತ್ತೀಚೆಗೆ ಸಭೆ ಸಮಾರಂಭಗಳಿಂದ ದೂರ ಉಳಿದಿದ್ದರು*  ಆರೋಗ್ಯ ಚೇತರಿಕೆ ಬಳಿಕ ಎಂದಿನಂತೆ ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಹೆಗಡೆ* ಉತ್ತರ ಕನ್ನಡದ ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ

ಬೆಂಗಳೂರು(ಜು. 09) ತಿಂಗಳುಗಳ ಬಳಿಕ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ನೇತೃತ್ವದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಭಾಗಿಯಾಗಿದ್ದರು.

ಅನಾರೋಗ್ಯ ಕಾರಣದಿಂದ ಹೆಗಡೆ ಸಭೆ ಸಮಾರಂಭಗಳಿಂದ ದೂರ ಉಳಿದಿದ್ದರು. ಆರೋಗ್ಯ ಚೇತರಿಕೆ ಬಳಿಕ ಎಂದಿನಂತೆ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ.

ಹೋಳಿ ರಂಗಲ್ಲಿ ಮಿಂದೆದ್ದ ಉತ್ತರ ಕನ್ನಡ ಸಂಸದ

ಸಭೆಯಲ್ಲಿ ಸಾಗರಮಾಲಾ ಯೋಜನೆ ಅನುಷ್ಠಾನದ ಬಗ್ಗೆ ಚರ್ಚೆ ನಡೆದಿದೆ. ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿದೆ.