Asianet Suvarna News Asianet Suvarna News

ನವೆಂಬರ್‌ ಅಂತ್ಯದೊಳಗೆ ಎಲ್ಲ ವಯಸ್ಕರಿಗೂ 2 ಡೋಸ್‌ ಲಸಿಕೆ

  • ನವೆಂಬರ್‌ ಅಂತ್ಯದೊಳಗೆ ರಾಜ್ಯದ ಎಲ್ಲಾ ವಯಸ್ಕರಿಗೂ ಎರಡೂ ಡೋಸ್‌ ಕೋವಿಡ್‌ ಲಸಿಕೆ 
  •  ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ
vaccination will completed before November snr
Author
Bengaluru, First Published Sep 7, 2021, 7:13 AM IST

 ಬೆಂಗಳೂರು (ಸೆ.07): ನವೆಂಬರ್‌ ಅಂತ್ಯದೊಳಗೆ ರಾಜ್ಯದ ಎಲ್ಲಾ ವಯಸ್ಕರಿಗೂ ಎರಡೂ ಡೋಸ್‌ ಕೋವಿಡ್‌ ಲಸಿಕೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಲಸಿಕಾ ಅಭಿಯಾನ ಕಡಿಮೆ ಸಾಧನೆ ಮಾಡಿದ 23 ಜಿಲ್ಲೆಗಳೊಂದಿಗೆ ಸೋಮವಾರ ವಿಧಾನಸೌಧದಲ್ಲಿ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಕುರಿತು ಮತ್ತು ಈ ತಿಂಗಳು ಎಲ್ಲರಿಗೂ ಮೊದಲ ಡೋಸ್‌ ಪೂರ್ಣಗೊಳಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಹಲವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕೊರೋನಾ ಏರಿಳಿತ, ಇಂದು (ಸೆ.7) ಭಾರೀ ಇಳಿಕೆ

ಕಳೆದ ವರ್ಷ ಹೆಚ್ಚು ಸೋಂಕಿತರಿದ್ದಾಗಲೂ ಸರಳ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿತ್ತು. ಈ ವರ್ಷ ಶೇ.0.7ರಷ್ಟುಪಾಸಿಟಿವಿಟಿ ದರ ಇದೆ. ಹೆಚ್ಚು ಸುರಕ್ಷತಾ ನಿಯಮ ಪಾಲಿಸಲು ಸೂಚಿಸಲಾಗಿದೆ. ಗಣೇಶ ಹಬ್ಬದ ವೇಳೆ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಮೆರವಣಿಗೆ ಮಾಡಲು ಅವಕಾಶ ಇಲ್ಲ. ಯಾವುದೇ ಜಿಲ್ಲೆಯಲ್ಲಿ ಶೇ.2ಕ್ಕಿಂತ ಹೆಚ್ಚಾದರೆ ಅಲ್ಲಿ ಬೇರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ನೆರೆ ರಾಜ್ಯ ಕೇರಳದಲ್ಲಿ ಒಬ್ಬ ಬಾಲಕನಿಗೆ ನಿಫಾ ವೈರಸ್‌ ಸೋಂಕು ಕಂಡು ಬಂದಿದ್ದು, ಈ ಸೋಂಕು ರಾಜ್ಯದಲ್ಲಿ ಎಲ್ಲಿಯೂ ಹರಡದಂತೆ ಕ್ರಮ ವಹಿಸಲಾಗಿದೆ. ಗಡಿಭಾಗದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಮೂರನೇ ಅಲೆ ತಡೆಗಟ್ಟುವುದು ಮುಖ್ಯವಾದ ಗುರಿಯಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನುಡಿದರು.

Follow Us:
Download App:
  • android
  • ios