ಪ್ರಾಣ ಬಿಟ್ಟೇವು, ಮೀಸಲಾತಿ ಬಿಡೆವು: ವಚನಾನಂದ ಶ್ರೀ
ಪಂಚಮಸಾಲಿ ಪ್ರತಿಭೆಗಳನ್ನು ಚಿವುಟುವ ಕೆಲಸವಾಗುತಿದ್ದು ಪ್ರಾಣ ಬಿಟ್ಟೇವು, ಆದೆ ಮೀಸಲಾತಿ ಬಿಡೆವು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು.
ಚಿತ್ರದುರ್ಗ (ನ.07): ಪಂಚಮಸಾಲಿ ಪ್ರತಿಭೆಗಳನ್ನು ಚಿವುಟುವ ಕೆಲಸವಾಗುತಿದ್ದು ಪ್ರಾಣ ಬಿಟ್ಟೇವು, ಆದೆ ಮೀಸಲಾತಿ ಬಿಡೆವು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು. ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿ ಕಾಲಂನಲ್ಲಿ ಪಂಚಮಸಾಲಿ ಎಂದು ಬರೆಸುವಂತೆ ಜಾಗೃತಿ ಮೂಡಿಸುವುದಕ್ಕಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇವೆ. ಮೀಸಲಾತಿ ಲಭ್ಯವಾಗುವ ತನಕ ವಿರಮಿಸುವುದಿಲ್ಲ ಎಂದರು. ಪಂಚಮಸಾಲಿಗಳಿಗೆ ಮೀಸಲಾತಿ ಸಿಗಬೇಕೆಂದು ಕಳೆದ 28 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ.
ಮೀಸಲಾತಿ ಇಲ್ಲದ ಕಾರಣ ನಮ್ಮ ಜನಾಂಗದ ಮಕ್ಕಳು ವೈದ್ಯಕೀಯ ಸೀಟಿನಿಂದ ವಂಚಿತರಾಗಿದ್ದಾರೆ. ಪಿಎಸ್‌ಐ ಹುದ್ದೆ ಪಡೆಯುವಲ್ಲಿ ವಿಫಲರಾಗಿದ್ದಾರು. ಕೇಂದ್ರ ಓಬಿಸಿ ಮೀಸಲಾತಿ ಅಂತಿಮ ಹಂತಕ್ಕೆ ತಲುಪಿದೆ. ಕೇಂದ್ರ ಹಿಂದುಳಿದ ವರ್ಗಗಳ ಆಯೋಗಕ್ಕೆ 900 ಪುಟಗಳ ದಾಖಲು ನೀಡಿದ್ದೇವೆ. ಹಾಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಶಿಫಾರಸು ಮಾಡಿದೆ ಎಂದರು. ನಾಗಮೋಹನ್ ದಾಸ್ ವರದಿಯನ್ವಯ ರಾಜ್ಯ ಸರ್ಕಾರ ಪರಿಶಿಷ್ಟಜಾತಿ, ಪರಿಶಿಷ್ಟವರ್ಗಗಳಿಗೆ ಮೀಸಲಾತಿಯನ್ನು ಹೆಚ್ಚಿಸಿದೆ. ಅದೇ ರೀತಿ ಜೈಪ್ರಕಾಶ್ ಹೆಗಡೆರವರು ಇನ್ನೊಂದು ತಿಂಗಳೊಳಗೆ ವರದಿ ಕೊಟ್ಟನಂತರ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಬೇಕು.
ಪಂಚರತ್ನ ಯೋಜನೆಗಳ ಜಾಗೃತಿಗೆ ರಾಜ್ಯಾದ್ಯಂತ ಎಚ್ಡಿಕೆ ಪ್ರವಾಸ: ನಿಖಿಲ್ ಕುಮಾರಸ್ವಾಮಿ
ರಾಜ್ಯದ ಮುಖ್ಯಮಂತ್ರಿ, ಅನೇಕ ಸಚಿವರು ಹಾಗೂ ಕೇಂದ್ರದ ಕೆಲವು ಸಚಿವರ ಜೊತೆ ಚರ್ಚಿಸಿದ್ದೇವೆಂದು ಹೇಳಿದರು. ಮಹಾರಾಷ್ಟ್ರದಲ್ಲಿ ನಮ್ಮ ಸಮಾಜದವರಿಗೆ ಅನ್ಯಾಯವಾದಂತೆ ಕರ್ನಾಟಕದಲ್ಲಿ ಮೀಸಲಾತಿಯಿಂದ ವಂಚನೆಯಾಗಲು ಬಿಡುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರವೂ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲು ಸಿದ್ದವಿದೆ. ಅದಕ್ಕಾಗಿ ಜಾತಿ ಕಾಲಂನಲ್ಲಿ ಪಂಚಮಸಾಲಿ ಎಂದು ಬರೆಸುವಂತೆ ವೀರಶೈವ ಪಂಚಮಸಾಲಿಗಳಲ್ಲಿ ಮನವಿ ಮಾಡುತ್ತಿದ್ದೇವೆ ಎಂದರು. ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಜೆ.ಶಿವಪ್ರಕಾಶ್, ತಾಲೂಕು ಅಧ್ಯಕ್ಷ ಬಸವರಾಜಪ್ಪ, ಕಾರ್ಯದರ್ಶಿ ಪ್ರಕಾಶ್, ನರೇಂದ್ರಬಾಬು, ವಿಶ್ವನಾಥ್ ಹಾಜರಿದ್ದರು.
ಜಾತಿ ಪ್ರಮಾಣ ಪತ್ರದಲ್ಲಿ ಪಂಚಮಸಾಲಿ ಎಂದು ನಮೂದಿಸಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗುವ ಮುನ್ನ ಜಾತಿ ಕಾಲಂನಲ್ಲಿ ಪಂಚಮಸಾಲಿ ಎಂದು ನಮೂದಿಸಿರುವ ಜಾತಿ ಪ್ರಮಾಣಪತ್ರ ಪಡೆಯಬೇಕು. ಸಮಾಜವನ್ನು ಈ ನಿಟ್ಟಿನಲ್ಲಿ ಜಾಗೃತಿಗೊಳಿಸಲು ಡಿ.11ರಂದು ನಗರದಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಪಂಚಮಸಾಲಿ ಹರಿಹರಪೀಠದ ವಚನಾನಂದ ಸ್ವಾಮೀಜಿ ತಿಳಿಸಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ. ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ಆಗುತ್ತಿದೆ. 18 ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಾಗಿದೆ. ಗದಗ, ಕೊಪ್ಪಳ ಜಿಲ್ಲೆಯಲ್ಲಿ ಅಧ್ಯಯನ ನಡೆಸಿದ ಬಳಿಕ ಸರ್ಕಾರಕ್ಕೆ ಆಯೋಗ ವರದಿ ಸಲ್ಲಿಸಲಿದೆ. ವರದಿ ಬಂದ ಮೇಲೆ ಸರ್ಕಾರ ಸಮಾಜಕ್ಕೆ 2ಎ ಮೀಸಲಾತಿ ಕೊಡಲಿದೆ.
Vijayapura: ಗುಮ್ಮಟನಗರಿಯ 52 ಪರೀಕ್ಷಾ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆ!
ಸಮಾಜದ ಶಾಸಕರು, ಸಚಿವರು ಸೇರಿದಂತೆ ಎಲ್ಲರೂ ಪಂಚಮಸಾಲಿಗಳಿಗೆ ಮೀಸಲಾತಿ ಕೊಡುವ ಬಗ್ಗೆ ಒಮ್ಮತ ಹೊಂದಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ಲಿಂಗಾಯತರಿಗೆ ಒಬಿಸಿ, ರಾಜ್ಯದಲ್ಲಿ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡಬೇಕು ಎಂದು ಅವರು ಆಗ್ರಹಿಸಿದರು. ಸಮಾಜದವರು ಸದ್ಯ 3ಬಿಯಲ್ಲಿದ್ದು, 2ಎ ಮೀಸಲಾತಿ ಸಿಗುವ ಮೊದಲು ಜಾತಿ ಮತ್ತು ಆದಾಯ ಪ್ರಮಾಣಪತ್ರದಲ್ಲಿ ಪಂಚಮಸಾಲಿ ಎಂದು ಬರೆಸಬೇಕು. ಈಗಾಗಲೇ ದಾವಣಗೆರೆ ಸೇರಿ ವಿವಿಧ ಜಿಲ್ಲೆಗಳಲ್ಲಿ ಪಂಚಮಸಾಲಿ ಎಂದು ನಮೂದಿಸಿದ ಜಾತಿ ಪ್ರಮಾಣಪತ್ರ ನೀಡಲಾಗಿದೆ. ಈ ಬಗ್ಗೆ ಸಮಾಜದವರಲ್ಲಿ ಜಾಗೃತಿ ಮೂಡಿಸಲು ಎಲ್ಲ ಜಿಲ್ಲೆಗಳಲ್ಲಿ ಜನಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ನ.23ರಿಂದ ಡಿ.11ರ ವರೆಗೆ ಹಾವೇರಿ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಸಂಚರಿಸಿ ಜನಜಾಗೃತಿ ಸಭೆ ನಡೆಸಲಾಗುವುದು. ಡಿ.11ರಂದು 2ಎ ಮೀಸಲಾತಿಗೆ ಹಕ್ಕೊತ್ತಾಯ ಹಾಗೂ ಜನಜಾಗೃತಿ ಸಮಾವೇಶ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.