ವಾಲ್ಮೀಕಿ ನಿಗಮದ ಹಣ ಬಾರ್‌ಗಳಿಗೆ ಕಳಿಸಿ ವಿತ್ ಡ್ರಾ: ಎಸ್‌ಐಟಿ ಶೋಧ
ಈ ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಬಂಧಿಸಿ ಬುಧವಾರ ನಗರಕ್ಕೆ ಕರೆತಂದಿರುವ ಸತ್ಯನಾರಾ ಯಣ ವರ್ಮಾ ಮತ್ತು ಚಂದ್ರಮೋಹನ್‌ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು (ಜೂ.14): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರು. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಮೊತ್ತವನ್ನು ಮದ್ಯದಂಗಡಿಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿ ಕೊಂಡು ನಗದು ಹಣ ಪಡೆದಿರುವುದು ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಬಂಧಿಸಿ ಬುಧವಾರ ನಗರಕ್ಕೆ ಕರೆತಂದಿರುವ ಸತ್ಯನಾರಾ ಯಣ ವರ್ಮಾ ಮತ್ತು ಚಂದ್ರಮೋಹನ್‌ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣವನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿ ಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.
ವಾಲ್ಮೀಕಿ ನಿಗಮದ ಮಾಜಿ ಎಂಡಿ ಬಳಿ 3.6 ಕೋಟಿ ಜಪ್ತಿ: ಮತ್ತೊಬ್ಬನ ಬಂಧನ
ಸಂಬಂಧಿಕರ ಮನೆಯಲ್ಲಿತ್ತು ಹಣ!: ಆರೋಪಿ ಸತ್ಯನಾರಾಯಣ ವರ್ಮಾ 8.21 ಕೋಟಿ ರು. ಹಣವನ್ನು 4 ಸೂಟ್ ಕೇಸ್‌ಗಳಲ್ಲಿ ತುಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಿದ್ದ. ಎಸ್‌ಐಟಿ ಅಧಿಕಾರಿಗಳು ಆರೋಪಿಯ ಸಂಬಂಧಿಕರ ಮನೆಗಳಿಗೆ ತೆರಳಿ ಹಣವನ್ನು ಜಪ್ತಿ ಮಾಡಿದ್ದಾರೆ. ಅಂತೆಯೆ ವಂಚಕ ಸತ್ಯನಾರಾಯಣ ವರ್ಮಾ ಓಡಾಡುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನೂ ಸಹ ಅಧಿಕಾರಿಗಳು ಜಪ್ತಿ ಮಾಡಿದಾರೆ.
ಈ ಸತ್ಯನಾರಾಯಣ ವರ್ಮಾ ಮತ್ತು ಆತನ ಸಹಚರ ಚಂದ್ರಮೋಹನ್ ಹೈದರಾ ಬಾದ್‌ನ ಕುಖ್ಯಾತ ವಂಚಕರಾಗಿದ್ದಾರೆ. ನಕಲಿ ಬ್ಯಾಂಕ್ ಖಾತೆ ತೆರೆಯವುದು, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದು ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಬೆಂಗಳೂರಿನ ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್ ಇಂಡಿಯಾ ದಲ್ಲಿ ಖಾತೆ ಹೊಂದಿದೆ. ಈ ಬ್ಯಾಂಕ್ ಖಾತೆ ಯಿಂದ 18 ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರು. ಹಣ ಅಕ್ರಮವಾಗಿ ವರ್ಗಾವಣೆಯಾಗಿತ್ತು.
ಈ ಸಂಬಂಧ ರಚನೆ ಯಾದ ಎಸ್‌ಐಟಿ, ತನಿಖೆ ವೇಳೆ ನಿಗಮದ ಬ್ಯಾಂಕ್ ಖಾತೆಯಿಂದ 18 ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಜಾಡು ಹಿಡಿದು ತನಿಖೆಗೆ ಇಳಿದಾಗ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸತ್ಯನಾರಾ ಯಣ, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್, ಆತನ ಬಾವಮೈದುನ ನಾಗೇಶ್ವರ್ ರಾವ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ಲೆಕ್ಕಾಧಿರಿ ಪರಶುರಾಮ್ ದುರ್ಗಣ್ಣವರ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ಹಣ ಅಕ್ರಮ ವರ್ಗಾವಣೆಯ ವ್ಯವಸ್ಥಿತ ಜಾಲ ಭೇದಿಸಿ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾ ರಿಗಳು ಹೈದರಾಬಾದ್ ಮೂಲದ ಸತ್ಯನಾರಾ ಯಣ ವರ್ಮಾ ಮತ್ತು ಚಂದ್ರಮೋಹನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ನಟ ದರ್ಶನ್ ಪಾರು ಮಾಡಲು ಯತ್ನಿಸಿದ್ದ ಪಟ್ಟಣಗೆರೆ ವಿನಯ್!
4 ಸೂಟ್‌ಕೇಸಲ್ಲಿತ್ತು 8.21 ಕೋಟಿ ಹಣ! ಹೈದರಾಬಾದ್‌ನಲ್ಲಿ ಬಂಧಿಸಲಾಗಿರುವ ಆರೋಪಿ ಸತ್ಯನಾರಾಯಣ ವರ್ಮಾ ಎಂಬಾತ 8.21 ಕೋಟಿ ರು. ಹಣವನ್ನು 4 ಸೂಟ್‌ಕೇಸಲ್ಲಿ ತುಂಬಿಸಿ ಸಂಬಂಧಿಕರ ಮನೆಯಲ್ಲಿ ಇರಿಸಿದ್ದ. ಆ ಹಣವನ್ನು ಜಪ್ತಿ ಮಾಡಲಗಿದೆ. ಓಡಾಡುತ್ತಿದ್ದ ಲ್ಯಾಂಬೋರ್ಗಿನಿ ಕಾರನ್ನೂ ಜಪ್ತಿ ಮಾಡಲಾಗಿದೆ.