Asianet Suvarna News Asianet Suvarna News

Breaking: ವಾಲ್ಮೀಕಿ ನಿಗಮ ಹಗರಣದ ಕೇಸಲ್ಲಿ ಮಾಜಿ ಸಚಿವ ನಾಗೇಂದ್ರನ ಪತ್ನಿಯನ್ನೂ ವಶಕ್ಕೆ ಪಡೆದ ಇ.ಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿಯನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

Valmiki Corporation Scam former minister B Nagendra wife Manjula arrested from ED sat
Author
First Published Jul 17, 2024, 12:27 PM IST | Last Updated Jul 17, 2024, 12:36 PM IST

ಬೆಂಗಳೂರು (ಜು.17): ರಾಜ್ಯದಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿಯನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಒಬ್ಬ ಅಧಿಕಾರಿಯೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹೊರಗೆ ಬಮದಿದತ್ತು. ಇದನ್ನು ತನಿಖೆ ಮಾಡಲು ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ ಮಾಡಿತ್ತು. ಇದರ ಬೆನ್ನಲ್ಲಿಯೇ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಹಗರಣ ನಡೆದಿದ್ದು, ಹವಾಲಾ ಕೂಡ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಸಿನ ತನಿಖೆಗೆ ಆಗಮಿಸಿದ ಜಾರಿ ನಿರ್ದೇಶನಾಲಯ (ಇ.ಡಿ) ಎಸ್‌ಐಟಿಯಿಂದ ಎಲ್ಲ ಮಾಹಿತಿಯನ್ನು ಪಡೆದು ತನಿಖೆ ಮುಂದುವರೆಸಿತ್ತು. 

ವಾಲ್ಮೀಕಿ ನಿಗಮದ ಕೋಟಿ ಕೋಟಿ ಹಣ ಚುನಾವಣೆಗೆ ಬಳಕೆ; ಹಗರಣದಲ್ಲಿ ನಾನಿಲ್ಲ ಎನ್ನುತ್ತಿದ್ದ ನಾಗೇಂದ್ರ ಈಗ ಮೌನ!

ಇದರ ಬೆನ್ನಲ್ಲಿಯೇ ಮಾಜಿ ಸಚಿವ ನಾಗೇಂದ್ರ ಅವರ ಮನೆಯ ಮೇಲೆ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲಿಯೇ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕರನ್ನು ಕರೆದು ವಿಚಾರಣೆ ಮಾಡಿದ್ದರು. ಆಪ್ತ ಸಹಾಯಕರ ವಿಚಾರಣೆ ಮಾಡಿದ ಬೆನ್ನಲ್ಲಿಯೇ ಮಾಜಿ ಸಚಿವ ನಾಗೇಂದ್ರನನ್ನೂ ವಶಕ್ಕೆ ಪಡೆಯಲಾಗಿತ್ತು. ಇದೀಗ ಬುಧವಾರ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.

ಪಂಚೆಯುಟ್ಟ ರೈತನಿಗೆ ಪ್ರವೇಶ ನಿರಾಕರಸಿ ಅವಮಾನಿಸಿದ ಜಿಟಿ ಮಾಲ್ ಸಿಬ್ಬದಿಯಿಂದ ಕೈಮುಗಿದು ಕ್ಷಮೆ!

ನಾಗೇಂದ್ರನ ಪತ್ನಿ ಮಂಜುಳಾ ಬ್ಯಾಂಕ್ ಖಾತೆಗೂ ಹಣ ಬಂದಿದೆ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ನಡೆದ 187 ಕೋಟಿ ಅವ್ಯವಹಾರಕ್ಕೆ ಸಂವಂಧಿಸಿದಂತೆ ಮಾಜಿ ಸಚಿವ ನಾಗೇಂದ್ರನನ್ನು ಬಂಧಿಸಿದ ನಂತರ ನಾಗೇಂದ್ರ ಅವರಿಗೆ ಸಂಬಂಧಪಟ್ಟ ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆ ಮಾಡಲಾಗಿದೆ. ಆದರೆ, ನಾಗೇಂದ್ರ ಸೇರಿದಂತೆ ಪತ್ನಿ ಹಾಗೂ ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡಲಾಗಿದೆ. ಈ ವೇಳೆ ನಾಗೇಂದ್ರ ಪತ್ನಿಯ ಬ್ಯಾಂಕ್ ಖಾತೆಯಲ್ಲಿಯೂ ಹೆಚ್ಚುವರಿಯಾಗಿ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರಿಂದ ಮಂಜುಳಾ ಅವರು ಇಡಿ ಕಾರಿನಲ್ಲಿ ಆತಂಕದಲ್ಲಿ ಕುಳಿತಿದ್ದಾರೆ.

Latest Videos
Follow Us:
Download App:
  • android
  • ios