ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರನೇ ಮಾಸ್ಟರ್ ಮೈಂಡ್ ಮತ್ತು ಲೋಕಸಭೆ ಚುನಾವಣೆಗೆ ಹಣ ಬಳಕೆ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ರೂ. ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖಿಸಿದೆ. 

Valmiki Corporation scam Nagendra is mastermind and use of money for Lok Sabha elections sat

ಬೆಂಗಳೂರು (ಸೆ.10): ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ರೂ, ಹಗರಣದ ಸಂಪೂರ್ಣ ಮಾಸ್ಟರ್ ಮೈಂಡ್ ಸಚಿವ ನಾಗೇಂದ್ರನೇ ಆಗಿದ್ದಾನೆ. ಜೊತೆಗೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಣವನ್ನು ಲೋಕಸಭಾ ಚುನಾವಣೆಗೂ ಬಳಕೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಕೆ ಮಾಡಿದ ದೋಷಾರೋಪಣಾ ಪಟ್ಟಿ (Chargesheet)ಯಲ್ಲಿ ಉಲ್ಲೇಖ ಮಾಡಲಾಗಿದೆ.

ಹೌದು, ರಾಜ್ಯದಲ್ಲಿ ನಡೆದಂತಹ ವಾಲ್ಮಿಕಿ ನಿಗಮ ಬಹುಕೋಟಿ ಹಗರಣ ಪ್ರಕರಣದ ತನಿಖೆ ಮಾಡುತ್ತಿದ್ದ ಜಾರಿ ನಿರ್ದೇಶನಾಲಯ ಇದೀಗ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದೆ. ಇದರಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮಾಜಿ ಸಚಿವ ನಾಗೇಂದ್ರ ಮೇಲೆ ಆರೋಪ ಹೊರಿಸಿದೆ. ಇಡಿ ಸಲ್ಲಿಕೆ ಮಾಡಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿ ಹಂತದಲ್ಲಿಯೂ ಸ್ವತಃ ಸಚಿವ ನಾಗೇಂದ್ರ ಭಾಗಿಯಾಗಿದ್ದು, ಆತನೇ ಡೀಲ್ ಮಾಡಿದ್ದಾನೆಂದು ಮಾಹಿತಿ ಅಳವಡಿಕೆ ಮಾಡಲಾಗಿದೆ. ಅಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಸಂಪೂರ್ಣ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರನೇ ಎಂದು ಉಲ್ಲೇಖಿಸಲಾಗಿದೆ.

ಬೆಂಗಳೂರು ರಿಯಲ್ ಎಸ್ಟೇಟ್ ಮಾಫಿಯಾ: ಬಿಡಿಎ, ಬಿಎಂಆರ್‌ಡಿಎ ಹೆಸರಿನಲ್ಲಿ 3,000ಕ್ಕೂ ಅನಧಿಕೃತ ಬಡಾವಣೆ!

ಇನ್ನು ಮಾಜಿ ಸಚೊವ ಬಿ. ನಾಗೇಂದ್ರ, ಸತ್ಯನಾರಯಣವರ್ಮ ಜೊತೆ ನಿಕಟ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಹಣದ ಬಳಕೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. ಈ ಹಣದಲ್ಲಿ ಒಟ್ಟು 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು 82ನೇ ಸಿಸಿಹೆಚ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

Latest Videos
Follow Us:
Download App:
  • android
  • ios