ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು: ನಳಿನ್ ಕುಮಾರ್ ಕಟೀಲ್
ಮಂಗಳೂರು-ಬೆಂಗಳೂರು ನಡುವೆ ವಿದ್ಯುದ್ಧೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣ ‘ವಂದೇ ಭಾರತ್’ ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಮಂಗಳೂರು (ಆ.06): ಮಂಗಳೂರು-ಬೆಂಗಳೂರು ನಡುವೆ ವಿದ್ಯುದ್ಧೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣ ‘ವಂದೇ ಭಾರತ್’ ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕಂಕನಾಡಿಯಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದಲ್ಲಿ ಸ್ವರ್ಣಯುಗ ಆರಂಭವಾಗಿದ್ದು, ರೈಲ್ವೆ ಇಲಾಖೆಯಲ್ಲೂ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಾಗಿವೆ. ಮಂಗಳೂರಿನಲ್ಲೂ ರೈಲ್ವೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಂಗಳೂರು-ಬೆಂಗಳೂರು ನಡುವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಮಂಗಳೂರು- ಗೋವಾ ನಡುವೆಯೂ ವಂದೇ ಭಾರತ್ ರೈಲು ಆರಂಭವಾಗಲಿದ್ದು, ರೈಲ್ವೆ ಸಚಿವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
Chitradurga: ಕವಾಡಿಗರಹಟ್ಟಿಗೆ ಸಚಿವ ರಹೀಂ ಖಾನ್ ಭೇಟಿ: ಅಧಿಕಾರಿಗಳೊಂದಿಗೆ ಸಭೆ!
ಮಂಗಳೂರಿಗೆ ರೈಲ್ವೆ ಯೋಜನೆಯಲ್ಲಿ ವಿಶೇಷ ಆದ್ಯತೆ ನೀಡಿ: ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದರೊಂದಿಗೆ ಮಂಗಳೂರಿಗೆ ವಿಶೇಷ ಆದ್ಯತೆ ನೀಡಿ ರೈಲ್ವೆ ಯೋಜನೆಗಳನ್ನು ಒದಗಿಸುವಂತೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ, ಮಂಗಳೂರು ಕೇಂದ್ರ ರೈಲು ನಿಲ್ದಾಣದ ಎಲ್ಲ ಫ್ಲ್ಯಾಟ್‌ಫಾರಂಗಳಿಗೂ ರೂಫಿಂಗ್ ಅಳವಡಿಕೆ, ಮಂಗಳೂರು- ಬೆಂಗಳೂರು ನಡುವ ಹಳಿ ಡಬ್ಲಿಂಗ್, ಮಂಗಳೂರು-ಬೆಂಗಳೂರು ನಡುವೆ ರೈಲ್ವೆ ಲೈನ್ ಸಂಪೂರ್ಣ ವಿದ್ಯುದೀಕರಣ, ಮಂಗಳೂರು ಪಾಂಡೇಶ್ವರದಲ್ಲಿ 4 ಲೈನ್ ಆರ್‌ಒಬಿ ನಿರ್ಮಾಣ ಹಾಗೂ ಸುಬ್ರಹ್ಮಣ್ಯದಲ್ಲಿ ಹೆಚ್ಚುವರಿ ಟರ್ಮಿನಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರ, ವರ್ಗಾವಣೆ ದಂಧೆ: ಪ್ರಲ್ಹಾದ್ ಜೋಶಿ
ಹೊಸ ರೈಲುಗಳಿಗೆ ಬೇಡಿಕೆ: ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಿರುವ ನಳಿನ್ ಕುಮಾರ್ ಅವರು, ಸುಬ್ರಹ್ಮಣ್ಯ ರೋಡ್‌ನಿಂದ ಮಂಗಳೂರಿಗೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲಿನ ಮರು ಪ್ರಾರಂಭಕ್ಕೆ ಮನವಿ ಮಾಡಿದ್ದಾರೆ. ಅಲ್ಲದೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ಮಂಗಳೂರು-ಮುಂಬಯಿ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ತಿರುವನಂತಪುರ-ಕಾಸರಗೋಡು ನಡುವೆ ಓಡಾಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ವರೆಗೆ ವಿಸ್ತರಣೆ, ಮಂಗಳೂರು ಕೇಂದ್ರ ನಿಲ್ದಾಣ-ಕಲಬುರಗಿ/ಬೀದರ್‌ಗೆ ಹಾಸನ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಗುಂಟಕಲ್, ಮಂತ್ರಾಲಯ ರಸ್ತೆ, ರಾಯಚೂರು, ಯಾದಗಿರಿ, ವಾಡಿ ಮೂಲಕ ಹೊಸ ರೈಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.