ಕಾವೇರಿಗಾಗಿ ಕರ್ನಾಟಕ ಬಂದ್: ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!
ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ. ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ.

ಬೆಂಗಳೂರು(ಸೆ.28): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ(ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೌದು, ಮೈಸೂರಿನಿಂದ ತೆರಳುವ ರೈಲು ತಡೆಯಲು ರೈತರು ಪ್ಲಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲುಗಳ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ. ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ.
ಕಾವೇರಿ ನೀರಾವರಿ ವಿಚಾರ : ಎಲ್ಲಾ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಬೆಂಬಲ
ಮೈಸೂರಿನ ಪ್ರಯಾಣಿಕರಿಗೆ ತಟ್ಟಲಿರುವ ಬಂದ್ ಬಿಸಿ ತಟ್ಟಲಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಜೊತೆಗೆ ರೈಲು ಮಾರ್ಗ ತಡೆದು ರೈತರು ಪ್ರತಿಭಟನೆ ನಡೆಸಲಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಿ, ರಾಜ್ಯದ ರೈತರನ್ನ ರಕ್ಷಿಸಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಬಂದ್ ಬೆಂಬಲಿಸಿ ಎಂದು ಕರೆ ನೀಡಿದೆ.