ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಕೆಶಿ ಶೀಘ್ರದಲ್ಲೇ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಉಡುಪಿ (ಮಾ.2): ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗುವುದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ ಎಂ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ 'ಕಾಂಗ್ರೆಸ್ ಕುಟುಂಬುತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಡಿಕೆ ಶಿವಕುಮಾರ ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಅಷ್ಟೇ ಅಲ್ಲ, ಅವರು ಸದ್ಯದಲ್ಲೇ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಮತ್ತೊಮ್ಮೆ ಎಚ್ಚರಿಕೆ! ಬಿಜೆಪಿಗೆ ಸವಾಲು, ಡಿಕೆ ಶಿವಕುಮಾರ ಹೇಳಿದ್ದೇನು?

ಡಿಕೆಶಿ ಕಾರ್ಕಳ ಗೊಮ್ಮಟೇಶ್ವರನಂತೆ ಬೆಳೆಯಲಿ:

ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿಯಾಗಿದೆ. ಡಿಕೆ ಶಿವಕುಮಾರ ಗೊಮ್ಮಟೇಶ್ವರನ ಹಾಗೆ ಬೆಳೆಯಲಿ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿದ್ದಾಗ ಸಂಚಲನ ಮೂಡಿಸಿದವರು. ರಾಷ್ಟ್ರದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕರಾಗಿದ್ದಾರೆ. ಪಕ್ಷಕ್ಕೆ ಒಳ್ಳೆಯ ನಾಯಕತ್ವ ಕೊಟ್ಟಿದ್ದಾರೆ, ಸಂಘಟನೆ ಮಾಡಿದ್ದಾರೆ. ಹೇಳಿಕೆಗಳು ಬರಬಹುದು, ಹೋಗಬಹುದು ಆದರೆ ನೀವು ಮುಖ್ಯಮಂತ್ರಿಯಾಗುವುದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಸಮ್ಮುಖದಲ್ಲಿ ಹಾಡಿ ಹೊಗಳಿದರು.

ಸಿಎಂ ಹುದ್ದೆ ಯಾರೋ ಕೊಡೋ ವರ ಅಲ್ಲ:

ಯಾರೂ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು ಅಷ್ಟೇ. ಮುಖ್ಯಮಂತ್ರಿ ಹುದ್ದೆ ಯಾರೋ ಕೊಡುವ ವರ ಅಲ್ಲ. ಅದು ಅವರು ಸಂಪಾದನೆ ಮಾಡಿರೋ ಶಕ್ತಿ. ಸಂಪದಾನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಕರ್ಕಾಳದ ಪುಣ್ಯಭೂಮಿಯಲ್ಲಿ ಆಡಿದ ಈ ಮಾತು ನೂರಕ್ಕೆ ನೂರು ಸತ್ಯ. ಆದರೆ ಡಿಕೆಶಿ ಅವರೇ ನೀವು ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಡಿಕೆಶಿ ಮುಖ್ಯಮಂತ್ರಿಯಾಗುವುದು ಸೆಟಲ್ಡ್ ಮ್ಯಾಟರ್, ಇದು ತೀರ್ಮಾನ ಆಗಿರುವ ವಿಚಾರ ಎಂದರು.

ಇದನ್ನೂ ಓದಿ: ಇದನ್ನೂ ಓದಿ:ಕನ್ನಡಚಿತ್ರರಂಗ, ಕಲಾವಿದರು ಡಿಕೆಶಿ ಜೀತದಾಳ? ಪಕ್ಷದ ಬಾವುಟ ಹಿಡಿದು ಮೇಕೆದಾಟು ಪಾದಯಾತ್ರೆ ಮಾಡಿದ್ರೆ ಯಾಕೆ ಬರಬೇಕು?

ಡಿಕೆಶಿ ಸಿಎಂ, ಜನರ ತೀರ್ಮಾನ ಆಗಿದೆ:

ಜನರ ಮನಸ್ಸಿನಲ್ಲಿ ಒಂದು ತೀರ್ಮಾನ ಆಗಿದೆ. ಡಿಕೆ ಶಿವಕುಮಾರ ಮುಂದಿನ ಸಿಎಂ ಆಗಲಿದ್ದಾರೆ. ಮ್ಯಾಟರ್ ಆಫ್ ಟೈಂ ಅಷ್ಟೇ. ಅವರ ಬೆಂಬಲಿಗರು ಕೂಡ ನಾವೇ ಮಾಡಿಸಿದ್ದೇವೆ ಎಂದು ಹೇಳಿಕೊಳ್ಳಬೇಕಾಗಿಲ್ಲ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆ ಶಿವಕುಮಾರ ಅವರಿಗೆ ಸಿಎಂ ಹುದ್ದೆ ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಅನ್ನೋದು ಶತಸಿದ್ಧ. ನೀವು ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪಿಲ್ಲ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ದೇವರ ಭೂಮಿ. ಆದರೆ ಬಿಜೆಪಿಯವರು ದೇವರ ಭೂಮಿಯನ್ನು ಋಣಭೂಮಿಯನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರೀ ಡಿಕೆಶಿ ಅಂದು ದೇವೇಗೌಡ್ರು ನಟ್ಟು ಬೋಲ್ಟ್ ಟೈಟ್ ಮಾಡಿದ್ರೆ ನೀವು ಇಂದು ಬೆಳೆಯೋಕೆ ಸಾಧ್ಯ ಇರಲಿಲ್ಲ: ಮುನಿರತ್ನ ಕಿಡಿ!