ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರು ರಾಮನಗರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ಹಿಂದೆ ಬಿಜೆಪಿ ತೊರೆದು ನಾಮ್ ತಮಿಲರ್ ಕಚ್ಚಿ ಪಕ್ಷ ಸೇರಿದ್ದ ವಿದ್ಯಾರಾಣಿ ಅವರ ಈ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಮನಗರ (ಮಾ.14): ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದು ಕುತೂಹಲ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಆಗಮಿಸಿದ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿದ್ಯಾರಾಣಿ ದೇವರ ಫೋಟೋ ನೀಡಿ ಆಶೀರ್ವಾದ ಪಡೆದರು.

ಇದನ್ನೂ ಓದಿ: ಕೊನೆಯುಸಿರು ಇರುವವರೆಗೂ ರಾಜಕೀಯದಲ್ಲಿ ಇರ್‍ತೀನಿ: ಸಿದ್ದು - ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರಗೂ ಆಶೀರ್ವದಿಸಿ

ವಿದ್ಯಾರಾಣಿ ರಾಜಕೀಯ ಪ್ರವೇಶ:

2020ರಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿದ ವಿದ್ಯಾರಾಣಿ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಆನಂತರ ಬಿಜೆಪಿ ತೊರೆದ ಅವರು, ನಾಮ್ ತಮಿಲರ್ ಕಚ್ಚಿ (ಎನ್‌ಟಿಕೆ) ಪಕ್ಷ ಸೇರ್ಪಡೆಯಾಗಿದ್ದಾರೆ. ಈಗ ಡಿಕೆಶಿ ತಮ್ಮನ್ನು ಭೇಟಿಯಾದ ವಿದ್ಯಾರಾಣಿ ಅವರೊಂದಿಗೆ ಮಾತುಕತೆ ನಡೆಸಲು ಪ್ರತ್ಯೇಕವಾಗಿ ಅವಕಾಶ ನೀಡುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಶುದ್ಧ ಭಕ್ತಿ ಇದ್ದರೆ ಮಾತ್ರವೇ ದೇವರು ಒಲಿಯುತ್ತಾನೆ: ಧರ್ಮಗಳ ಬಗ್ಗೆ ಸಿಎಂ ಹೇಳಿದ್ದೇನು?