ನಮ್ಮದೇ ಸರ್ಕಾರದ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಸರ್ವೇ ನಡೆಸಿಲ್ಲ ಎಂದು ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು (ನ.9): ನಮ್ಮದೇ ಸರ್ಕಾರದ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಸರ್ವೇ ನಡೆಸಿಲ್ಲ ಎಂದು ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದರು.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಈ ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿಯನ್ನು ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಬಂದಿದೆ ಹೀಗಾಗಿ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡುವಂತೆ ಒತ್ತಾಯಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಕ್ಕರೆ ಕಾರ್ಖಾನೆಗಳು ಉತ್ಪಾದಿಸೋ ವಿದ್ಯುತ್‌ ಸರ್ಕಾರಕ್ಕೆ: ಶಾಮನೂರು ಶಿವಶಂಕರಪ್ಪ

ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ. ಎಲ್ಲರ ಒಳಿತನ್ನು ಬಯಸುವುದು ಸಮುದಾಯದ ಗುರಿಯಾಗಿದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ, ಆದರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಈ ಜಾತಿ ಗಣತಿ ವರದಿ ಈಗಾಗಲೇ 8 ವರ್ಷದಷ್ಟು ಹಳೆಯದಾಗಿದೆ. ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಹೀಗಾಗಿ ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು. 

ಶಾಮನೂರು ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಲಿ: ಬೊಮ್ಮಾಯಿ

ಇದೇ ವೇಳೆ ಸಿಎಂ ಭೇಟಿಗೆ ನಿಯೋಗ ಹೋಗ್ತೀರಾ ಎಂಬ ಪ್ರಶ್ನೆಗೆ ನಾವು ಯಾರೂ ಸಿಎಂ ಭೇಟಿಗೆ ಹೋಗಲ್ಲ ಎಂದ ಎಂದು ಸ್ಪಷ್ಟಪಡಿಸಿದರು.