Asianet Suvarna News Asianet Suvarna News

ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ ಇನ್ನಿಲ್ಲ

ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು. 

Veteran Writer Kamala Hampana Passed Away due to Heart Attack in Bengaluru grg
Author
First Published Jun 22, 2024, 9:06 AM IST

ಬೆಂಗಳೂರು(ಜೂ.22):  ಹಿರಿಯ ಲೇಖಕಿ ಕಮಲಾ ಹಂಪನಾ(89) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ(ಶುಕ್ರವಾರ) ರಾತ್ರಿ ನಿದ್ದೆಯಲ್ಲೇ ಹೃದಯಾಘಾತದಿಂದ ಕಮಲಾ ಹಂಪನಾ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. 

ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು. 

ಪಂ.ರಾಜೀವ್‌ ತಾರಾನಾಥ್‌ ಅಸ್ತಂಗತ: ರಾಗದಿಂದ ಸರೋದ್‌ ವಾದನದೆಡೆಗೆ ಸಾಗಿದ ಹಾದಿಯೇ ಅಚ್ಚರಿ..!

ಕಮಲಾ ಹಂಪನಾ ಅವರ ಪತಿ ಹಿರಿಯ ಲೇಖಕ ಹಂ.ಪ. ನಾಗರಾಜಯ್ಯ. ರಾಜಾಜಿನಗರದ ಮನೆಯಲ್ಲೇ ಕಮಲಾ ಹಂಪನಾ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಮಲಾ ಹಂಪನಾ ಅವರ ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ರಾಮಯ್ಯ ಮೆಡಿಕಲ್​​ ಕಾಲೇಜಿಗೆ ಕಮಲಾ ದೇಹದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. 

ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

Latest Videos
Follow Us:
Download App:
  • android
  • ios