Asianet Suvarna News Asianet Suvarna News

ಗಣೇಶೋತ್ಸವಕ್ಕೆ ಅನುಮತಿ ನೀಡಿ: ವಿಎಚ್‌ಪಿ ಮನವಿ

  • ಗಣೇಶ ಹಬ್ಬ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು
  • ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ 
VHP Demands for ganesha festival celebration snr
Author
Bengaluru, First Published Aug 29, 2021, 7:39 AM IST
  • Facebook
  • Twitter
  • Whatsapp

  ಬೆಂಗಳೂರು (ಆ.29):  ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. 

ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

ಆರೋಗ್ಯದ ದೃಷ್ಟಿಯಿಂದ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕಳೆದ ಬಾರಿ ಸಾರ್ವಜನಿಕ ಪೆಂಡಾಲ್‌ಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

 ಹೀಗಾಗಿ ಈ ಬಾರಿಯು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಸಂಪ್ರದಾಯದಂತೆ ಹಬ್ಬ ಆಚರಿಸಲು ಅವಕಾಶ ಮಾಡಿಕೊಡಬೇಕು.

Follow Us:
Download App:
  • android
  • ios