ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಅವರಿಗೆ ಚಿಕ್ಕಮಗಳೂರು ಜಿಲ್ಲೆಗೆ ಒಂದು ತಿಂಗಳ ಕಾಲ ಪ್ರವೇಶ ನಿಷೇಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಚಿಕ್ಕಮಗಳೂರು (ಜು.5): ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಶರಣ್ ಪಂಪ್‌ವೆಲ್‌ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ. ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿರುವ ಪಂಪ್‌ವೆಲ್, ಕೋಮುದ್ವೇಷ ಹರಡುವ ಮತ್ತು ಪ್ರಚೋದನಾಕಾರಿ ಭಾಷಣಗಳಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಗಣಪತಿ ವಾಸುಕಿ ವಿಗ್ರಹ ಒದ್ದು ಅವಮಾನಿಸಿದ ಅನ್ಯಕೋಮಿನ ಯುವಕರು; ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ!

ಚಿಕ್ಕಮಗಳೂರು ಸೇರಿದಂತೆ ಕೆಲವು ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶಗಳಾಗಿದ್ದು, ಸಣ್ಣ ಘಟನೆಗಳೂ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಧ್ವಂಸ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿ, ಪೊಲೀಸ್‌ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತರಾಟೆ