ಉಪರಾಷ್ಟ್ರಪತಿ ಜಗ್ದೀಶ್ ರಾಧಕೃಷ್ಣನ್ ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಯ ಚಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ, ದೇಗುಲದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಮಂಡ್ಯ, (ನ.9): ಕರ್ನಾಟಕದ ಧಾರ್ಮಿಕ ನೆಲೆಯಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಗೆ ಇಂದು ಉಪರಾಷ್ಟ್ರಪತಿ ಜಗ್ದೀಶ್ ರಾಧಕೃಷ್ಣನ್ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.

Add Asianetnews Kannada as a Preferred SourcegooglePreferred

ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತ ಸಂಪೂರ್ಣ ಸಿದ್ಧತೆ ನಡೆಸಿದ್ದು, ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ಮೇಲುಕೋಟೆಯ ಸುತ್ತಮುತ್ತಲು ಬಿಗಿಭದ್ರತೆ:

ಉಪರಾಷ್ಟ್ರಪತಿಗಳು ಆಗಮಿಸಲಿರುವ ಹಿನ್ನೆಲೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ, ಡ್ರೋನ್ ಹಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಉಪರಾಷ್ಟ್ರಪತಿಗಳ ಆಗಮಿಸಿ ದೇವಸ್ಥಾನ ದರ್ಶನದ ಪಡೆಯಲಿರುವುದರಿಂದ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ಜಾರಿಯಲ್ಲಿದ್ದು, ಅವರು ವಾಪಸಾಗುವವರೆಗೂ ದೇಗುಲದೊಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ.

ಸ್ಥಳೀಯ ಭಕ್ತರಲ್ಲಿ ಉತ್ಸಾಹದ ವಾತಾವರಣ:

ಉಪರಾಷ್ಟ್ರಪತಿ ರಾಧಕೃಷ್ಣನ್ ಅವರ ಈ ಭೇಟಿಯು ಮೇಲುಕೋಟೆಯ ಚಲುವನಾರಾಯಣಸ್ವಾಮಿ ರಾಷ್ಟ್ರಮಟ್ಟದಲ್ಲಿ ಪ್ರಚಾರ ಪಡೆಯಲಿದೆ. ಇದರಿಂದ ಪ್ರವಾಸಿಗರು, ಭಕ್ತರ ಸಂಖ್ಯೆ ಹಚ್ಚಳವಾಗಲಿದೆ ಎಂದು ಸ್ಥಳೀಯ ಆರಾಧಕರಲ್ಲಿ ಉತ್ಸಾಹದ ವಾತಾವರಣ ಸೃಷ್ಟಿಸಿದೆ.

ಕರ್ನಾಟಕದ ಧಾರ್ಮಿಕ ನೆಲೆಯಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಗೆ ಇಂದು ಉಪರಾಷ್ಟ್ರಪತಿ ಜಗ್ದೀಶ್ ರಾಧಕೃಷ್ಣನ್ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.