Asianet Suvarna News Asianet Suvarna News

ಇಂದು ನಗರಕ್ಕೆ ಉಪರಾಷ್ಟ್ರಪತಿ ಭೇಟಿ; ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಒಂದು ದಿನದ ಪ್ರವಾಸಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಉಪರಾಷ್ಟ್ರಪತಿಗಳು ಭೇಟಿ ನೀಡುವ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

Vice President Jagdeep Dhankar will arrive karnataka today rav
Author
First Published May 27, 2024, 9:33 AM IST

ಬೆಂಗಳೂರು (ಮೇ.27): ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಒಂದು ದಿನದ ಪ್ರವಾಸಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಉಪರಾಷ್ಟ್ರಪತಿಗಳು ಭೇಟಿ ನೀಡುವ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇನ್ಪೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಎಂ ಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ ಹಾಗೂ ವಿಂಡ್ ಟನಲ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಇಂದು ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪರ್ಯಾಯ ಮಾರ್ಗ ಬಳಸಲು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

 

ಹೇಗಿದೆ ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ

Latest Videos
Follow Us:
Download App:
  • android
  • ios