ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ ಸಂತ್ರಸ್ತೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ 

ಬೆಂಗಳೂರು(ಏ.28): ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಸ್‌ಐಟಿ ತನಿಖೆಗೆ ಸಿಎಂ ತೀರ್ಮಾನ!

ಈಗಾಗಲೇ ರಾಜ್ಯ ಸರ್ಕಾರ ಈ ಲೈಂಗಿಕ ಶೋಷಣೆಯ ಆರೋಪದ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ. ಈ ತನಿಖಾ ತಂಡವು ಸಂತ್ರಸ್ತೆಯ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಲಿದೆ. ಭಾನುವಾರ ಎಸ್‌ಐಟಿ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.