Asianet Suvarna News Asianet Suvarna News

ಉತ್ತರ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿಯಿಂದ ಅವಿಶ್ವಾಸ ಅಸ್ತ್ರ?

ಬಿಜೆಪಿ ‘ಅವಿಶ್ವಾಸ’ ಅಸ್ತ್ರ! ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಕಡೆಗಣನೆ ಆರೋಪ! ಉತ್ತರ ಕರ್ನಾಟಕದ ಶಾಸಕರಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ?! ಸರ್ಕಾರದ ವಿರುದ್ಧ ಸಿಡಿದೇಳಲು ಮುಂದಾದ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು! ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟಕ್ಕೆ ಪ್ಲಾನ್! ಉತ್ತರ ಕರ್ನಾಟಕಕ್ಕಾದ ಅನ್ಯಾಯ ಪ್ರಸ್ತಾಪಿಸಿ ಅವಿಶ್ವಾಸ ನಿರ್ಣಯ ಮಂಡಿಸಲು ಚಿಂತನೆ

ಬೆಂಗಳೂರು(ಡಿ.05): ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಕಡೆಗಣನೆ ಆರೋಪಿಸಿ ಬಿಜೆಪಿ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಯೋಜನೆಯಲ್ಲಿದೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಶಾಸಕರಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದ್ದು, ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

Video Top Stories