4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ ನೀರು
* ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮೆಳೆ
* ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿಹೆಚ್ಚಳ
* ಇದರಿಂದ ನದಿಗಳಿಗೆ 2600 ಕ್ಯೂಸೆಕ್ಸ್ ನೀರು ರಿಲೀಸ್
ವಿಜಯನಗರ, (ಜು. 24): ಮಳೆಯ ಅಬ್ಬರಕ್ಕೆ ಹಳ್ಳ-ಕೊಳ್ಳ, ಕೆರೆ-ಕಟ್ಟೆ ಹಾಗೂ ನದಿಗಳು ಹುಕ್ಕಿಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿವೆ.
ಇನ್ನು ರಾಯಚೂರು, ವಿಜಯನಗರ, ಕೊಪ್ಪಳ ಹಾಗೂ ಬಳ್ಳಾರಿ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದ್ದು, ಇಂದು (ಜು.24) ಸಂಜೆ ಗಂಟೆ ಮಾಹಿತಿ ಪ್ರಕಾರ 124000 ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.
ಇದರಿಂದ 2600 ಕ್ಯೂಸೆಕ್ಸ್ ನೀರು ನದಿಗಳಿಗೆ ಬಿಡಲಾಗಿದ್ದು, ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ತುಂಗಭದ್ರಾ ಆಡಳಿತ ಮಂಡಳಿ ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ಚಿಕ್ಕಮಗಳೂರು, ಶಿವಮೊಗ್ಗ, ಹೊನ್ನಾಳಿ, ಭದ್ರಾವತಿ, ದಾವಣಗೆರೆ ಹೀಗೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದೆ.
ಈಗಾಗಲೇ ತುಂಗಾಭದ್ರೆಯಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಬಿಡಲಾಗಿದ್ದು, ಇದೀಗ ಒಳಹರಿವು ಹೆಚ್ಚಳವಾಗಿದ್ದರಿಂದ ನದಿಗೆ ಬಿಡಲಾಗಿದೆ.