ನೋಟಿಸ್‌ ಬಂದಿಲ್ಲ, ಬಂದರೂ ಉತ್ತರ ಕೊಡೋಲ್ಲ, ಇವಕ್ಕೆಲ್ಲ ಹೆದರುವ ಮಗ ನಾನಲ್ಲ ಎಂದ ಯತ್ನಾಳ್!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ವರಿಷ್ಠರು ನೋಟಿಸ್ ನೀಡಿದ್ದಾರೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ನೋಟಿಸ್ ಬಂದರೂ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.

Vijayapur mla basangowda patil yatnal reacts about Notice from Central Disciplinary Committee of BJP rav

ವಿಜಯಪುರ (ಫೆ.14): ‘ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ’ ಎಂದು ನಗರ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಭಿನ್ನರ ಪಡೆ ನಾಯಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿರುವ ಕುರಿತಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಎಂದು ಖಡಕ್ ಆಗಿ ಉತ್ತರಿಸಿದರು.

ಇದನ್ನೂ ಓದಿ: ಮೆಟ್ರೋ ಟಿಕೆಟ್ ಏರಿಕೆ ನಿರ್ಧಾರ ಕೇಂದ್ರದ್ದು: ಸಿಎಂ | ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ: ತೇಜಸ್ವಿ ಸೂರ್ಯ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವುದಕ್ಕೆ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಳೆದ ಸೋಮವಾರ ಮತ್ತೆ ನೋಟಿಸ್ ನೀಡಿತ್ತು. ನೋಟಿಸ್‌ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿತ್ತು ಎಂದು ವರದಿಯಾಗಿತ್ತು. ಮೂರು ದಿನಗಳ ಗಡುವು ಗುರುವಾರ ಮುಗಿಯಲಿದೆ. ಹೀಗಾಗಿ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

ನನಗೆ ನೂರಾರು ನೋಟಿಸ್‌ ಬರ್ತಾವೆ

ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ

ಬಸನಗೌಡ ಪಾಟೀಲ್‌ ಯತ್ನಾಳ್‌, ಬಿಜೆಪಿ

ಇದನ್ನೂ ಓದಿ: Karnataka New Live: ರಾಜ್ಯ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿ ಯಾರು? ಮತ್ತೆ ರೆಬೆಲ್ ಆದ ಯತ್ನಾಳ್!

3 ದಿನಗಳ ಗಡುವು ಇಂದು ಮುಕ್ತಾಯ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಸಂಬಂಧ ಶಾಸಕ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿತ್ತು. ಮೂರು ದಿನಗಳೊಳಗೆ ಉತ್ತರ ನೀಡಿದ್ದರೆ ಕ್ರಮ ಕೈಗೊಳ್ಳುವುದಾಗಿತ್ತು.v

Latest Videos
Follow Us:
Download App:
  • android
  • ios