Asianet Suvarna News Asianet Suvarna News

ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲು!

ವಿಜಯಪುರ ಸಂಸದ ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆ ದಾಖಲಾಗಿದ್ದಾರೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡುತ್ತಿರುವ ವೈದ್ಯರು.

Vijayapur MP Ramesh Jigajinagi admitted to KLE hospital at belagavi rav
Author
First Published Mar 3, 2024, 11:22 AM IST

ಬೆಳಗಾವಿ (ಮಾ.3): ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಸಂಸದ ರಮೇಶ್ ಜಿಗಜಿಣಗಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿರುವ ಕೆಎಲ್‌ಇ ವೈದ್ಯರು. ನಿನ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿನ್ನೆ ಬೆಳಗಾವಿಗೆ ತೆರಳಿದ್ದರು. ಆರೋಗ್ಯದ ಸ್ವಲ್ಪ ಏರುಪೇರಾದ ಕಾರಣ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ತಂದೆಯವರ ಹಿರಿಯ ಸಹೋದರಿ ರಾಧಾಬಾಯಿ (97) ಮೃತಪಟ್ಟಿದ್ದರು. ಹಿರಿಯ ಸಹೋದರಿಯನ್ನು ಬಹಳ ಹಚ್ಚಿಕೊಂಡಿದ್ದರು. ಮಿದುಳಿನಲ್ಲಿ ಸ್ವಲ್ಪ ರಕ್ತ ಹೆಪ್ಪುಗಟ್ಟಿತ್ತು
ಸಣ್ಣರಂಧ್ರದ ಮೂಲಕ ಹೆಪ್ಪುಗಟ್ಟಿದ ರಕ್ತವನ್ನು ಹೊರ ತೆಗೆಯಲಾಗಿದೆ. ಸದ್ಯ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿರವಾಗಿದೆ ಸಂಸದ ರಮೇಶ ಜಿಗಜಿಣಗಿ ಪುತ್ರ ವಿನೋದ್ ಮಾಹಿತಿ ನೀಡಿದ್ದಾರೆ.

ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು; ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು

ಕಳೆದ ವಾರವಷ್ಟೇ ತೀವ್ರ ಉಸಿರಾಟ ತೊಂದರೆಯಿಂದ ಅಸ್ವಸ್ಥಗೊಂಡಿದ್ದರು ಬೆಳಗಾವಿ ಮೂಲಕ ದೆಹಲಿಗೆ ತೆರಳುವ ವೇಳೆ ಬಾಗಲಕೋಟೆಯಲ್ಲಿ ದಿಢೀರನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಸಂಸದ ರಮೇಶ್ ಜಿಗಜಿಣಗಿ ಅವರನ್ನು ಸ್ಥಳೀಯ ಕುಮಾರೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತು.

ಕಳೆದೊಂದು ವಾರದಿಂದ ಸಂಸದರು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿದೆ. ಈ ನಡುವೆ ಲೋಕಸಭಾ ಚುಣಾವಣೆಗೆ ಓಡಾಟ, ಪ್ರಯಾಣ ಹೆಚ್ಚಾಗಿದ್ದರಿಂದ ಮತ್ತೆ ದಿಡೀರ್ ಆರೋಗ್ಯ ಏರುಪೇರಾಗಿದೆ.

ತಾವು ತಾವೇ ಹೊಡಿದಾಡಿ ಸಾಯಲಿಕ್ಕತ್ಯಾರ ಇನ್ನ ದಲಿತರನ್ನ ಹೆಂಗ ಸಿಎಂ ಮಾಡ್ತಾರ?: ಕಾಂಗ್ರೆಸ್ ವಿರುದ್ಧ ಸಂಸದ ಜಿಗಜಿಣಗಿ ಕಿಡಿ

Follow Us:
Download App:
  • android
  • ios