ಮಳವಳ್ಳಿಯಲ್ಲಿ ನಡೆದ ಸುತ್ತೂರು ಶ್ರೀಗಳ ಜಯಂತೋತ್ಸವದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನಗಳು ವಿಫಲವಾಗಲಿವೆ ಎಂದಿದ್ದಾರ ಎಂದರು.
ಮಳವಳ್ಳಿ (ಡಿ.21): ವೀರವೈಶ ಲಿಂಗಾಯತ ಸಮಾಜವನ್ನು ಒಡೆದು ಆಳಲು ಕೆಲವರಿಂದ ನಿರಂತರ ಪ್ರಯತ್ನಗಳು ನಡೆಯುತ್ತಿದೆ. ಆದರೆ, ಅದು ಯಶಸ್ವಿಯಾಗಿಲ್ಲ, ಮುಂದೆಯೂ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮೋದಿ ಬಸವಣ್ಣರನ್ನ ಸ್ಮರಿಸುತ್ತಾರೆ:
ಪಟ್ಟಣದಲ್ಲಿ ಶನಿವಾರ ನಡೆದ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತೋತ್ಸವದಲ್ಲಿ ಮಾತನಾಡಿ, ಕಾಯಕಯೋಗಿ ಬಸವಣ್ಣನವರ ಸಮ ಸಮಾಜ ನಿರ್ಮಾಣವಾಗಬೇಕಾದರೆ ವೀರವೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ವೈಮನಸ್ಸು ಮರೆತು ಒಗ್ಗೂಡಿ ಕೆಲಸ ಮಾಡಬೇಕು. ಭಿಕ್ಷುಕ ದೇಶವೆನ್ನುತ್ತಿದ್ದ ಭಾರತವಿಗ ಬಲಿಷ್ಠ ರಾಷ್ಟ್ರವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಯಾವ ದೇಶಕ್ಕೂ ಹೋದರೂ ಬಸವಣ್ಣ ಅವರನ್ನು ನೆನೆಯುತ್ತಾರೆ ಎಂದು ಹೇಳಿದರು.
ತಮ್ಮ ಜೀವಿತಾವಧಿಯಲ್ಲಿ ಸಮಾಜದ ಸುಧಾರಣೆಗೆ ಶ್ರಮಿಸಿದ ಶಿವರಾತ್ರೀಶ್ವರ ಶಿವಯೋಗಿಗಳ ಸೇವೆ ಅನನ್ಯ. ಅವರ ಕಾರ್ಯವನ್ನು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮುನ್ನಡೆಸಿಕೊಂಡು ಹೋಗುತ್ತಿದ್ದು, ಸುತ್ತೂರು ಕ್ಷೇತ್ರ ತ್ರಿವಿಧ ದಾಸೋಹಕ್ಕೆ ಸೀಮಿತವಾಗದೇ ಸಮಾಜದಲ್ಲಿ ನೊಂದವರ ಪಾಲಿಗೆ ನೆರವಾಗಿದೆ. ಸರ್ಕಾರ ಮಾಡದ ಕೆಲಸವನ್ನು ಶ್ರೀಮಠ ಮಾಡುತ್ತಿದೆ ಎಂದು ಶ್ಲಾಘಿಸಿದರು.


