ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಆಕಾಂಕ್ಷಿಗಳೇ ಈ ಸುದ್ದಿ ಓದಿ: ಕೆಲಸದ ಒತ್ತಡಕ್ಕೆ 50 ವಿಲೇಜ್ ಅಕೌಂಟೆಂಟ್‌ಗಳ ಸಾವು!
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿದವರು ಓದಲೇಬೇಕಾದ ಸುದ್ದಿಯಿದು. ಸರ್ಕಾರ ನೀಡುವ ಕೆಲಸದ ಒತ್ತಡ ತಾಳಲಾರದೇ 50ಕ್ಕೂ ಅಧಿಕ ವಿಲೇಜ್ ಅಕೌಂಟೆಂಟ್‌ಗಳು ಸಾವಿಗೀಡಾಗಿದ್ದಾರೆ.
ಹಾವೇರಿ (ಸೆ.25): ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿದವರು ಓದಲೇಬೇಕಾದ ಸುದ್ದಿಯಿದು. ಸರ್ಕಾರ ನೀಡುವ ಕೆಲಸದ ಒತ್ತಡ ತಾಳಲಾರದೇ 50ಕ್ಕೂ ಅಧಿಕ ವಿಲೇಜ್ ಅಕೌಂಟೆಂಟ್‌ಗಳು ಸಾವಿಗೀಡಾಗಿದ್ದಾರೆ. ರಾಜ್ಯ ಸರ್ಕಾರದಿಂದ ಕೊಡಲಾಗುವ ಕೆಲಸದ ಅತಿಯಾದ ಒತ್ತಡ ಹಿನ್ನಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಗ್ರಾಮ ಲೆಕ್ಕಾಧಿಕಾರಿಳು ಮೃತಪಟ್ಟಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘ ಘೋಷಣೆ ಮಾಡಿದೆ.
ಸರ್ಕಾರಿ ಕೆಲಸವೆಂದರೆ ದೇವರ ಕೆಲಸ ಎಂದು ವಿಧಾನಸೌಧದ ಮೇಲೆ ಬರೆಯಲಾಗಿದೆ. ಸರ್ಕಾರಿ ಸೇವೆಯಲ್ಲಿ ಭ್ರಷ್ಟಾಚಾರ ಮಾಡಬಾರದು ಎಂಬ ಉದ್ದೇಶದಿಂದ ಈ ವಾಕ್ಯವನ್ನು ಬರೆಯಲಾಗಿದ್ದರೂ, ಭ್ರಷ್ಟಾಚಾರ ಎಲ್ಲೆಡೆ ತಾಂಡವಾಡುತ್ತಿದೆ. ಆದರೆ, ಸರ್ಕಾರದಿಂದ ಕಳೆದ ನಾಲ್ಕೈದು ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಗಳಿಗೆ (Village Accountant) ಹೆಚ್ಚಿನ ಕೆಲಸವನ್ನು ನೀಡಲಾಗುತ್ತಿದೆ. ಇದರಿಂದಾಗಿ ಕೆಲಸದ ಒತ್ತಡ ಹೆಚ್ಚಾಗಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡು ಸಾವನ್ನಪ್ಪುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 50ಕ್ಕೂ ಅಧಿಕ ಗ್ರಾಮ ಲೆಕ್ಕಾಧಿಕಾರಿಗಳು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆನೇಕಲ್‌ನಲ್ಲಿ 22 ವರ್ಷದ ವಿಲೇಜ್ ಅಕೌಂಟೆಂಟ್ ನೇಣಿಗೆ ಶರಣು: ಯುವತಿ ಸಾವಿನ ಸುತ್ತ ಅನುಮಾನ
ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ಸದಸ್ಯರು ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳು ಹಾರ್ಟ್ ಅಟ್ಯಾಕ್, ಬ್ರೇನ್ ಹ್ಯಾಮರೇಜ್ ಸೇರಿದಂತೆ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗುತ್ತಿದ್ದಾರೆ. ಇತ್ತೀಚೆಗೆ 15 ಕ್ಕೂ ಹೆಚ್ಚು ಆ್ಯಪ್‌ಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಈ ಕೆಲಸ ಮಾಡುವುದಕ್ಕೆ ಸರಿಯಾದ ಮೂಲಭೂತ ಸೌಲಭ್ಯಗಳೂ ಇಲ್ಲ. ಗ್ರಾಮ ಲೆಕ್ಕಾಧಿಕಾರಿಗಳು ಕೂತು ಕೆಲಸ ಮಾಡುವುದಕ್ಕೆ ಕಚೇರಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಮೇಲಾಧಿಕಾರಿಗಳು ಆ್ಯಪ್ ವರ್ಕ್ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.
ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳನ್ನು ಹಿರಿಯ ಅಧಿಕಾರಿಗಳು ಪ್ರತಿದಿನ ಸಂಜೆ 7 ಗಂಟೆಯ ನಂತರ ವಿಡಿಯೋ ಕಾನ್ಪರೆನ್ಸ್ ತಗೊತಾರೆ. ಪಹಣಿ ಆಧಾರ್ ಸೀಡಿಂಗ್, ಲ್ಯಾಂಡ್ ಬೀಟ್ ಸೇರಿದಂತೆ ಹಲವು ಕೆಲಸಗಳನ್ನು ಆ್ಯಪ್‌ಗಳಲ್ಲಿ ಮಾಡಲಾಗುತ್ತಿದೆ. ಒಂದು ಆ್ಯಪ್ ವರ್ಕ್ ಕಂಪ್ಲೀಟ್ ಆಗಿರಲ್ಲ. ಷ್ಟರೊಳಗೆ ಮತ್ತೊಂದು ಆ್ಯಪ್‌ನಲ್ಲಿ ಎಷ್ಟು ಟಾರ್ಗೆಟ್ ರೀಚ್ ಆಗಿದ್ದೀರಿ ಎಂದು ಮೇಲಾಧಿಕಾರಿಗಳು ಟಾರ್ಚರ್ ಕೊಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂಗೆ ಮತ್ತೆ ಶಾಕ್, ಲೋಕಾಯುಕ್ತ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್!
ಗ್ರಾಮ ಲೆಕ್ಕಾಧಿಕಾರಿಗಳಿಗೆ ತೀವ್ರ ಕೆಲಸದ ಒತ್ತಡ ನೀಡುತ್ತಾ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸಕ್ಕೆ ಗೈರಾಗಿ ಆಯಾ ತಹಶಿಲ್ದಾರರ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಗ್ರಾಮ ಆಡಳಿತಾಧಿಕಾರಿ ಕೇಂದ್ರ ಸಂಘದ ಮುಖಂಡ ರುದ್ರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.