ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಜಾತಿ/ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. 9019913319 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಬೆಂಗಳೂರು (ಫೆ.15): ಬೆಂಗಳೂರಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದೆಯೇ? ಚಿಂತಿಸಬೇಡಿ! ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಗಾಗಿ ಸಹಾಯವಾಣಿ ಸ್ಥಾಪಿಸಲಾಗಿದೆ. 9019913319 ಸಂಖ್ಯೆಗೆ ಕರೆ ಮಾಡಿ.

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ / ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಛೇರಿ, 4 ನೇ ಮಹಡಿನಲ್ಲಿ ಕಂಟ್ರೋಲ್ ಸೆಂಟರ್ ನಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ, ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು / ಅಭ್ಯರ್ಥಿಗಳ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9019913319ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯದ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ರಾಜ್ಯದಾದ್ಯಂತ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟವಧಿ ಮುಷ್ಕರ ಮುಂದುವರಿಸಿದ್ದಾರೆ. ಹೀಗಾಗಿ, ರಾಜ್ಯದಾದ್ಯಂತ ತಾಲೂಕು ಕಛೇರಿ ನಡೆಯುತ್ತಿರುವ ಮುಷ್ಕರದಿಂದ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರಿಗೆ ಕೆಲವೊಂದು ಸರ್ಕಾರಿ ಪ್ರಮಾಣ ಪತ್ರಗಳನ್ನು ಪಡೆಯಲು ಭಾರೀ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡುವಂತೆ ಸ್ಥಳೀಯ ಶಾಸಕರು ಹಾಗೂ ಸರ್ಕಾರದಿಂದ ಸೂಚನೆ ನೀಡಿದರೂ ಮುಷ್ಕರದಿಂದ ಹಿಂಜರಿಯುತ್ತಿದ್ದ. ಹೀಗಾಗಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಸಹಾಯವಾಣಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಸಹಾಯವಾಣಿ ಆರಂಭವಾಗುವ ಸಾಧ್ಯತೆಯಿದೆ.