ಆಪಲ್ ಏರ್ ಪಾಡ್ ಉತ್ವಾದನಾ ಘಟಕ ಸ್ಥಳಾಂತರ ವಿಚಾರವಾಗಿ ಕರ್ನಾಟಕ-ತೆಲಂಗಾಣ ರಾಜ್ಯಗಳ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಉತ್ಪಾದನಾ ಘಟಕ ಹೈದ್ರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರ ಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಹಿನ್ನೆಲೆ ಇದೀಗ ಸ್ವತಃ ಡಿಕೆ ಶಿವಕುಮಾರ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು (ನ.4) ಆಪಲ್ ಏರ್ ಪಾಡ್ ಉತ್ವಾದನಾ ಘಟಕ ಸ್ಥಳಾಂತರ ವಿಚಾರವಾಗಿ ಕರ್ನಾಟಕ-ತೆಲಂಗಾಣ ರಾಜ್ಯಗಳ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಉತ್ಪಾದನಾ ಘಟಕ ಹೈದ್ರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರ ಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಹಿನ್ನೆಲೆ ಇದೀಗ ಸ್ವತಃ ಡಿಕೆ ಶಿವಕುಮಾರ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಆಪಲ್ ಏರ್ ಪಾಡ್ ಉತ್ಪಾದನಾ ಘಟಕವನ್ನು ಸ್ಥಳಾಂತರಕ್ಕೆ ನಾನು ಫಾಕ್ಸ್ ಕಾನ್‌‌ ಸಂಸ್ಥೆಗೆ ಪತ್ರ ಬರೆದಿಲ್ಲ. ಇದೊಂದು ನಕಲಿ ಪತ್ರವಾಗಿದ್ದು ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ ಎಂದು ಡಿಕೆ ಶಿವಕುಮಾರ ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಎಚ್‌ಡಿಕೆ ಸಪೋರ್ಟ್ ಮಾಡೋ ವಿಚಾರ; ನೋಡಪ್ಪ ಮಾಡೋ ಕಾಲದಲ್ಲೇ ಮಾಡಿಲ್ಲ, ಈಗೇನು ಮಾಡೋದು: ಡಿಕೆಶಿ ತಿರುಗೇಟು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ವೈರಲ್ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ರಾಜೇಂದ್ರ ಎಂಎನ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು. ಪತ್ರದಲ್ಲಿ ಕರ್ನಾಟಕ ಸರ್ಕಾರ ಲೆಟರ್ ಹೆಡ್ ಮತ್ತು ಡಿಸಿಎಂ ಅವರ ಸಹಿಯನ್ನ ನಕಲು ಮಾಡಲಾಗಿದೆ. ನಕಲಿ ಪತ್ರ ಸೃಷ್ಟಿ ಮಾಡಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು.

Scroll to load tweet…