ಕ್ರಿಕೆಟ್ ವಿಚಾರಕ್ಕೆ ಹುಡುಗರ ಮಧ್ಯೆ ಜಗಳ; ದೊಡ್ಡವರ ಮಧ್ಯೆ ಮಾರಮಾರಿ ವಿಡಿಯೋ ವೈರಲ್!
ಕ್ರಿಕೆಟ್ ಆಟವಾಡುತ್ತಿದ್ದ ಹುಡುಗರ ಮಧ್ಯ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಮಾರಾಮಾರಿ ಹಾಗೂ ಕಲ್ಲು ತೂರಾಟ ನಡೆದ ಘಟನೆ ನಗರದ ಶಹಪೂರ ಪ್ರದೇಶದ ಅಳ್ವಾನ ಗಲ್ಲಿಯಲ್ಲಿ ಗುರುವಾರ ನಡೆದಿದೆ. ಗಲಾಟೆಯಲ್ಲಿ 8 ಜನರು ಗಾಯಗೊಂಡಿದ್ದಾರೆ.
ಬೆಳಗಾವಿ (ಮೇ.24): ಕ್ರಿಕೆಟ್ ಆಟವಾಡುತ್ತಿದ್ದ ಹುಡುಗರ ಮಧ್ಯ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳು ಮಾರಾಮಾರಿ ಹಾಗೂ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಶಹಪೂರ ಪ್ರದೇಶದ ಅಳ್ವಾನ ಗಲ್ಲಿಯಲ್ಲಿ ಗುರುವಾರ ನಡೆದಿದೆ. ಗಲಾಟೆಯಲ್ಲಿ 8 ಜನರು ಗಾಯಗೊಂಡಿದ್ದಾರೆ.
ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೋ ಲಭ್ಯವಾಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಹಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಅಳ್ವಾನ್ ಗಲ್ಲಿಯಲ್ಲಿ ನಡೆದಿರುವ ಘಟನೆ.
ಅಂಜಲಿ, ನೇಹಾ ಹಂತಕರನ್ನು ಎನ್‌ಕೌಂಟರ್ ಮಾಡಿ: ಬೆಸ್ತ ಸಮಾಜ ಸಂಘದಿಂದ ಪ್ರತಿಭಟನೆ
ಘಟನೆ ಹಿನ್ನೆಲೆ:
ಗಲ್ಲಿ ಕ್ರಿಕೆಟ್‌ನಲ್ಲಿ ಮಕ್ಕಳ ನಡುವಿನ ಜಗಳ ವಿಷಯ ದೊಡ್ಡವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೈ ಕೈಮೀಲಾಸುವ ಹಂತಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆಯಾಗಿದೆ. ಬಳಿಕ ಇದರಲ್ಲಿ ಮಧ್ಯೆ ಪ್ರವೇಶಿಸಿದ ಎರಡು ಗುಂಪಿನವರು ಪರಸ್ಪರ ಬಡಿದಾಡಿಕೊಂಡಿರುವ ಯುವಕರು. ಗಲಾಟೆಯಲ್ಲಿ ಹಲವರಿಗೆ ಗಾಯ ಓರ್ವ ಪೊಲೀಸ್ ಪೇದೆ ಅಮರ್ ಎಂಬುವವರು ಸಹ ಗಾಯಗೊಂಡಿದ್ದಾರೆ.
ತಲ್ವಾರ್ ಹಿಡಿದು ಓಡಾಟ!
ಕೈಯಲ್ಲಿ ತಲ್ವಾರ್ ಹಿಡಿದು ಓಡಾಟ ಮಾಡಲಾಗಿರುವ ವಿಡಿಯೋ ವೈರಲ್ ಆಗಿದ್ದು, ಘಟನೆ ಕುರಿತು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆಗೆ ಮುಂದಾಗಿರುವ ಶಹಾಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳೀಯರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪರಸ್ಪರ ಆರೋಪ ಮಾಡುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಜನರನ್ನು ಸಮಾಧಾನ ಪಡಿಸಿಕಳುಹಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್, ಡಿಸಿಪಿ ರೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗಾವಿ: ಹಾಡುಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಭೀಕರ ಕೊಲೆ!
ಡಿಸಿಪಿ ಹೇಳೋದೇನು?
ಕ್ರಿಕೆಟ್ ಆಡುವಾಗ ಸಣ್ಣ ಗಲಾಟೆ ಆಗಿದೆ. ಅದಾದ ಬಳಿಕ ಎಲ್ಲರೂ ಮನೆಗೆ ತೆರಳಿದ್ದಾರೆ. ಇದಾದ ಬಳಿಕ ಸ್ವಲ್ಪ ಜಗಳ ಆಗಿದೆ. ತಕ್ಷಣ ನಮ್ಮ ಪೊಲೀಸರು ಸ್ಥಳಕ್ಕೆ ತೆರಳಿ ಕಾನೂನು ಸುವ್ಯವಸ್ಥೆ ಹತೋಟಿಗೆ ತಂದಿದ್ದಾರೆ. ಈಗ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗ ದೂರ ದಾಖಲಾಗುತ್ತಿದೆ. ನಮ್ಮ ತನಿಖೆಯಲ್ಲಿ ಸಿಸಿ ಟಿವಿ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದೆ. ಅದನ್ನು ನಾವು ನಿಭಾಯಿಸುತ್ತಿದ್ದೇವೆ ಎಂದಿದ್ದಾರೆ.