Asianet Suvarna News Asianet Suvarna News

ಬ್ರಾಹ್ಮಣರು ಸಿಎಂ ಆಗಬಾರದಾ, ಅವರೂ ಈ ದೇಶದ ಪ್ರಜೆಗಳಲ್ಲವೇ?: ಪೇಜಾವರ ಶ್ರೀ

ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆಂದು ಎಲ್ಲಿದೆ? ಅವರು ಭಾರತದ ಪ್ರಜೆಗಳಲ್ಲವೇ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. 

Vishwaprasanna Tirtha Swamiji Talks About Brahmin CM At Mandya gvd
Author
First Published Feb 7, 2023, 3:00 AM IST

ಮದ್ದೂರು (ಮಂಡ್ಯ) (ಫೆ.07): ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆಂದು ಎಲ್ಲಿದೆ? ಅವರು ಭಾರತದ ಪ್ರಜೆಗಳಲ್ಲವೇ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ಆಡಿರುವ ಮಾತುಗಳಿಗೆ ಸಂಬಂಧಿಸಿ ಸೋಮವಾರ ಸುದ್ದಿಗಾರರ ಜತೆಗೆ ಪ್ರತಿಕ್ರಿಯಿಸಿದ ಅವರು, ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಹೊಸದೇನಲ್ಲ. ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧ ಮಾತುಗಳು ಕೇಳಿಬರುತ್ತಲೇ ಇವೆ. ಚುನಾವಣೆ ಬಂದಾಗ ಇದು ಹೆಚ್ಚಾಗುತ್ತೆ ಅಷ್ಟೇ ಎಂದರು.

ಬ್ರಾಹ್ಮಣರಾರ‍ಯರೂ ಧ್ವನಿ ಎತ್ತಿ ಮಾತನಾಡುವುದಿಲ್ಲ, ಸಂಖ್ಯಾ ಬಲ ಇಲ್ಲ. ಬ್ರಾಹ್ಮಣರು ಅಲ್ಪಸಂಖ್ಯಾತರು. ಆದ ಕಾರಣ ಏನು ಮಾತನಾಡಿದರೂ ನಡೆಯತ್ತದೆ ಎಂದು ಮಾತನಾಡ್ತಾರೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ? ಎಷ್ಟುಮಂದಿಗೆ ಟಿಕೆಟ್‌ ಕೊಟ್ಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. ಬ್ರಾಹ್ಮಣರ ವಿರುದ್ಧ ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಅದಕ್ಕೊಂದು ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಯಾರೋ ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನು ದೂಷಿಸುವುದಾದರೆ ಇತರೆ ಸಮಾಜದಲ್ಲಿ ನಡೆದ ವಿಚಾರವನ್ನು ಆ ರೀತಿ ಏಕೆ ನೋಡುವುದಿಲ್ಲ ಎಂದು ಪ್ರಶ್ನಿಸಿದರು.

ಕಂದಾಯ ಸಚಿವ ಅಶೋಕ್‌ರ ಗ್ರಾಮ ವಾಸ್ತವ್ಯಕ್ಕೆ ರೈತ ಸಂಘ ಲೇವಡಿ

ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆದರೆ ಒಂದು ಧರ್ಮದ ವಿರುದ್ಧ ಮತ್ತೊಂದು ಧರ್ಮ ಪುಟಿದೇಳಬೇಕು. ಅದನ್ನು ಬಿಟ್ಟು ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನು ದೂಷಿಸುವುದು ಸರಿಯಲ್ಲ. ಯಾವ ಧರ್ಮಕ್ಕೂ ಅನ್ಯಾಯ ಆಗಬಾರದು ಎಂದು ಹೇಳಿದರು.

1 ಲಕ್ಷ ನಾಣ್ಯಗಳೊಂದಿಗೆ ಪೇಜಾವರ ಶ್ರೀ ತುಲಾಭಾರ: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಪಂಚಾಮೃತ ಅಭಿಷೇಕ ಮಾಡಿ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇಗುಲದ ಆವರಣದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್‌ ನೇತೃತ್ವದಲ್ಲಿ 1 ಲಕ್ಷ ರುಪಾಯಿ ನಾಣ್ಯಗಳೊಂದಿಗೆ ತುಲಾಭಾರ ಸೇವೆ ನೆರವೇರಿಸಲಾಯಿತು. 

ನಂತರ ಸೇವೆಯಿಂದ ಸಂಗ್ರಹವಾದ ನಿಧಿಯನ್ನು ದೇಗುಲದ ಅಭಿವೃದ್ಧಿ ಕಾರ್ಯಕ್ಕೆ ಬಳಸುವಂತೆ ಶ್ರೀಗಳು ಸಲಹೆ ನೀಡಿದರು. ಬೆಂಗಳೂರಿನಿಂದ ಬೆಳಗ್ಗೆ 8.30ಕ್ಕೆ ಆಗಮಿಸಿದ ಶ್ರೀಗಳನ್ನು ದೇವಾಲಯದ ಹಿರಿಯ ಅರ್ಚಕ ಕೃಷ್ಣಾಚಾರ್‌, ಪ್ರಧಾನ ಅರ್ಚಕ ಪ್ರದೀಪಾಚಾರ್ಯ, ಸಹ ಅರ್ಚಕ ಸುರೇಶಾಚಾರ್ಯ ಸೇರಿ ನೆರೆದಿದ್ದ ಅಖಂಡ ಭಕ್ತ ಸಮೂಹ ಮಂಗಳವಾದ್ಯ ಸಮೇತ ಬರಮಾಡಿಕೊಂಡು ಪುಷ್ಪಾರ್ಚನೆ ಮಾಡಿ ಸಾಂಪ್ರದಾಯಿಕ ಸ್ವಾಗತ ಕೋರಿದರು. ಬಳಿಕ ಆಶೀರ್ವಚನ ನೀಡಿದರು.

ಫುಡ್ ಪಾಯ್ಸನ್‌ಗೆ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಅಯೋಧ್ಯೆ ರಾಮಮಂದಿರ ನಿರ್ಮಾಣ ಪ್ರತಿಷ್ಠಾಪನಾ ಮಹೋತ್ಸವ 2024ರ ಮಕರ ಸಂಕ್ರಾಂತಿಯೊಳಗೆ ಪೂರ್ಣಗೊಳ್ಳುತ್ತದೆ. ಅಯೋಧ್ಯೆ ರಾಮಮಂದಿರ ಪ್ರತಿಷ್ಠಾನೆಗೂ ಮುನ್ನ ನಿಧಿ ಸಂಗ್ರಹ ಕಾರ್ಯ ದೇಶಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಜನ್ಮಭೂಮಿ ಟ್ರಸ್ಟಿಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮಹೋತ್ಸವಕ್ಕೆ 3 ಸಾವಿರ ಕೋಟಿ ನಿಧಿ ಸಂಗ್ರಹಣೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಭಕ್ತರ ಮನೆಯಿಂದ ಕನಿಷ್ಠ 100 ರು. ದೇಣಿಗೆಯನ್ನು ಭಿಕ್ಷೆ ರೂಪದಲ್ಲಿ ಸಂಗ್ರಹಿಸುವುದು ನಮ್ಮ ಗುರಿ. ರಾಮಮಂದಿರ ನಿರ್ಮಾಣ ಕೇವಲ ನಮ್ಮ ಕನಸಲ್ಲ, ಇಡೀ ದೇಶದ ರಾಮಭಕ್ತರ ಕನಸಾಗಬೇಕು ಎಂದರು.

Follow Us:
Download App:
  • android
  • ios