ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆನಡವಳಿ ಹೊರಡಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಬೆಂಗಳೂರು, (ಜು.17): ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ.

ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ ಅಕ್ಕಮಹಾದೇವಿ ನಡವಳಿಗಳನ್ನು ಹೊರಡಿಸಿದ್ದು, 2021-22ನೇ ಸಾಲಿನ ಅಯವ್ಯಯ ಕಂಡಿಕೆ-148ರಲ್ಲಿ ಒಕ್ಕಲಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ ರೂ.500 ಕೋಟಿ ಪ್ರಸ್ತಾಪಿದೆ.

ಒಕ್ಕಲಿಗರ ಮೀಸಲಾತಿ ಹೆಚ್ಚಿಸದಿದ್ದರೆ ಪ್ರತ್ಯೇಕ ರಾಜ್ಯ ಕೇಳುತ್ತೇವೆ: ಸೋಮೇಶ್ವರನಾಥ ಶ್ರೀ

 ಒಕ್ಕಲಿಗ ಸಮುದಾಯಗಳಾದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3ಎನಲ್ಲಿ ಕ್ರ.ಸಂ-1ರ(a) ಯಿಂದ (t) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ವ ಒಕ್ಕಲಿಗೆ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(GOUDA)/ಗೌಡ(GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ 'ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದೆ.

ಒಕ್ಕಲಿಗ, ವಕ್ಕಲಿಗ, ಸರ್ವ ಒಕ್ಕಲಿಗೆ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(GOUDA)/ಗೌಡ(GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ ಜಾತಿಗಳಿಗೆ 3ಎ ನಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ. 

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಬೇಕೆಂದು ಹಲವು ರಾಜಕೀಯ ನಾಯಕರುಗಳು ಸರ್ಕಾರಕ್ಕೆ ಆಗ್ರಹಿಸಿದ್ದರು.