ಗುಯಿಲಾಳು ಟೋಲ್ ಬಳಿ ಹೊತ್ತಿ ಉರಿದ ಖಾಸಗಿ ಬಸ್; ಸುಖ ನಿದ್ದೆಯಲ್ಲಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರು!

ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್ ಬಳಿ ನಡೆದಿದೆ.

VRL bus fire accident near Guilala toll gate chitradurga rav

ಚಿತ್ರದುರ್ಗ (ಡಿ.21): ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ 4:30ರ ಸುಮಾರಿಗೆ ಸಂಭವಿಸಿರುವ ಅವಘಡ. ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್. ಬಸ್ಸಿನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಗುಯಿಲಾಳು ಟೋಲ್ ಬಳಿ ಬಸ್ ಬರುತ್ತಿದ್ದಂತೆ ಟೈರ್‌ ಬಳಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ ಬಳಿಕ ಏಕಾಏಕಿ ಟೈರ್ ಸ್ಫೋಟಿಸಿ ಬಸ್ ಹೊತ್ತಿ ಉರಿದಿದೆ.

ಲೈನರ್ ಸ್ಪರ್ಶಿಸಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ. ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

VRL bus fire accident near Guilala toll gate chitradurga ravಮತ್ತೊಂದು ಖಾಸಗಿ ಬಸ್‌ಗೂ ಬೆಂಕಿ:

ಮಂಗಳೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಬಳಿ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಡೆದಿದ್ದ ಘಟನೆ. ಬಸ್‌ನಲ್ಲಿ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಖಾಸಗಿ ಬಸ್‌ಗಳು ಪ್ರಯಾಣಿಕರಿಗೆ ಸುರಕ್ಷಿತವಲ್ಲವೇ? ಎಂಬ ಅನುಮಾನ ಮೂಡಿಸಿದೆ. ಒಂದೇ ದಿನ ಎರಡು ಖಾಸಗಿ ಬಸ್‌ಗಳಿಗೆ ಅದೂ ಬೆಳಗಿನ ಜಾವ ಬೆಂಕಿ ಹೊತ್ತಿಕೊಳ್ಳುತ್ತಿರುವದು ಪ್ರಯಾಣಿಕರು ರಾತ್ರಿ ಪ್ರಯಾಣಕ್ಕೆ ಹಿಂಜರಿಯುವಂತೆ ಆಗಿದೆ. 

Latest Videos
Follow Us:
Download App:
  • android
  • ios