ಬೆಂಗಳೂರು(ಜು.22):  ಕಳೆದ ಒಂದು ವಾರದಿಂದ ನಗರದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿಷೇಧ ತೆರವಾಗಿರುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮತ್ತು ಕಬ್ಬನ್‌ ಉದ್ಯಾನವನಗಳಲ್ಲಿ ಬುಧವಾರದಿಂದ ಸಾರ್ವಜನಿಕರ ವಾಯು ವಿಹಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇಂದಿನಿಂದ(ಬುಧವಾರ) ಬೆಳಗ್ಗೆ 6 ರಿಂದ 9 ಮತ್ತು ಸಂಜೆ 4.30 ರಿಂದ 7 ಗಂಟೆಯವರೆಗೂ ಸಾರ್ವಜನಿಕರ ವಾಯುವಿಹಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್‌ ಮಾಹಿತಿ ನೀಡಿದ್ದಾರೆ.

ಕೊರೋನಾ ಎಫೆಕ್ಟ್: ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ರದ್ದು!

ಸರ್ಕಾರದ ಮಾರ್ಗ ಸೂಚಿಯಂತೆ ಉದ್ಯಾನಗಳಲ್ಲಿನ ಬೆಂಚ್‌ಗಳ ಮೇಲೆ ಜನ ಕೂರಬಾರದು ಎಂಬ ನಿಯಮವಿದೆ. ಲಾಲ್‌ಬಾಗ್‌ ಮತ್ತು ಕಬ್ಬನ್‌ ಉದ್ಯಾನದಲ್ಲಿ ಸುಮಾರು 500ಕ್ಕೂ ಹೆಚ್ಚು ಬೆಂಚ್‌ಗಳಿದ್ದು, ಇವುಗಳ ಮೇಲೆ ಕೂರದಂತೆ ಭದ್ರತಾ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ಕೊಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.