ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಚ್‌ಗೆ ಸೋಮವಾರ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಬೆಂಗಳೂರು (ಆ.20) : ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಚ್‌ಗೆ ಸೋಮವಾರ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಶನಿವಾರ ಸಂಜೆ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್(HK Patil), ರಾಜ್ಯದಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡ್ವೊಕೇಟ್ ಜನರಲ್ ಹಾಗೂ ಸಚಿವರ ಅಭಿಪ್ರಾಯದಂತೆ ಸೋಮವಾರ ಸುಪ್ರೀಂಕೋರ್ಚ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದಲ್ಲಿ ಮಳೆ ಅಭಾವ(Lack of rain)ದ ಹಿನ್ನೆಲೆಯಲ್ಲಿ ಕಾವೇರಿನಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದೆ. ರಾಜ್ಯಕ್ಕೆ ಕುಡಿಯುವ ಅಗತ್ಯಕ್ಕೂ ನೀರಿಲ್ಲದಂತಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಪ್ರತಿನಿಧಿಗಳು ವಾದಿಸಿದ್ದರೂ ಕಾವೇರಿ ನಿರ್ವಹಣಾ ಪ್ರಾಧಿಕಾರವು ನಿತ್ಯ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದೆ. ಇದರಂತೆ ರಾಜ್ಯ ಸರ್ಕಾರ ಸ್ವಲ್ಪ ನೀರನ್ನೂ ಬಿಡುಗಡೆ ಮಾಡಿದೆ.
ತಮಿಳುನಾಡು ಎದುರು ದೈನೇಸಿಯಾಗಿ ಮಂಡಿಯೂರಿದ ಕರ್ನಾಟಕ ಕಾಂಗ್ರೆಸ್ ಸರ್ಕಾರ : 10 ಟಿಎಂಸಿ ಕಾವೇರಿ ನೀರು ಬಿಡುಗಡೆ
ಈ ಬಗ್ಗೆ ರೈತರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ(Advocate General Sasikiran Shetty)ಅವರನ್ನು ಕರೆಸಿಕೊಂಡು ವಿಸ್ತೃತ ಚರ್ಚೆ ನಡೆಸಲಾಗಿದೆ. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್(DK Shivakumar) ಸೇರಿದಂತೆ ಹಿರಿಯ ಸಚಿವರು ಮೇಲ್ಮನವಿ ಹೋಗಬೇಕಾದ ಅನಿವಾರ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಪ್ರಾಧಿಕಾರದ ಸೂಚನೆಯಂತೆ ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗಲಿದೆ. ಆದ್ದರಿಂದ ರಾಜ್ಯದಲ್ಲಿನ ಮಳೆ ಅಭಾವ, ಕುಡಿಯುವ ನೀರಿನ ಅಗತ್ಯ ಹಾಗೂ ತಮಿಳುನಾಡಿನ ಜಲಾಶಯಗಳ ನೀರಿನ ಮಟ್ಟದ ಆಧಾರದ ಮೇಲೆ ಪ್ರಾಧಿಕಾರ ನೀಡಿರುವ ಆದೇಶ ರದ್ದುಪಡಿಸುವಂತೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ಯಾವುದೇ ಪ್ರತಿಭಟನೆ ಬೇಡ:
ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಬಿಜೆಪಿಯು ಮಂಡ್ಯ ಬಂದ್‌ಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಎಚ್.ಕೆ. ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿದ್ದಾರೆ. ಇದನ್ನು ಅಧಿಕೃತವಾಗಿಯೂ ಪ್ರಕಟಿಸಿದ್ದಾರೆ. ಹೀಗಾಗಿ ಯಾರೂ ಯಾವುದೇ ಪ್ರತಿಭಟನೆ, ಹೋರಾಟ ಮಾಡುವ ಅಗತ್ಯವಿಲ್ಲ. ಎಲ್ಲರೂ ಒಂದು ಕಡೆ ಸೇರಿ ರಾಜ್ಯದ ಹಿತದೃಷ್ಟಿಯಿಂದ ಚರ್ಚಿಸಲು ಅವಕಾಶವಿದೆ ಎಂದರು.
