ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನ ತಡೆಯಬೇಕು: ಸಿಎಂ ಸಿದ್ದರಾಮಯ್ಯ
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸೇರಿದ್ದು, ಅದರ ತಳಹದಿಯನ್ನು ಹಾಳು ಮಾಡುವ, ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಬೆಂಗಳೂರು (ಫೆ.17): ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸೇರಿದ್ದು, ಅದರ ತಳಹದಿಯನ್ನು ಹಾಳು ಮಾಡುವ, ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೆಲವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಮತ್ತು ಗೌರವ ಇಲ್ಲ. ಹೀಗಾಗಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.
ಜಾತ್ಯತೀತತೆ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳು ಸಂವಿಧಾನದ ಅಡಿಪಾಯವಾಗಿದ್ದು, ಅದನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ವಿಫಲಗೊಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
‘ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾಗಿವೆ. ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಕಳೆದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. 75 ವರ್ಷ ಕಳೆದರೂ ನಮ್ಮ ಸಮಾಜದಿಂದ ಅಸಮಾನತೆ ದೂರವಾಗಿಲ್ಲ ಎಂದು ’ ಎಂದಿದ್ದಾರೆ.
ಬಜೆಟ್‌ನಲ್ಲಿ ನಟ ಧನಂಜಯ್; ಡಾಲಿ ಬರೆದ ಸಾಲುಗಳನ್ನ ಮಂಡಿಸಿದ ಮುಖ್ಯಮಂತ್ರಿಗಳು
ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು, ಸಂವಿಧಾನ ನೀಡಿರುವ ಆರ್ಥಿಕ, ಸಾಮಾಜಿಕ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಬೇಕು. ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.