ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಬೋಸರಾಜ
ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸ್ಪಷ್ಟಪಡಿಸಿದರು.
ರಾಯಚೂರು (ಡಿ.11) : ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸ್ಪಷ್ಟಪಡಿಸಿದರು.
ನಗರದಲ್ಲಿ ಭಾನುವಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿಲ್ಲ. ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು.
ಇಡೀ ದೇಶವೇ 'ಕರ್ನಾಟಕ ಮಾಡೆಲ್' ಅನುಸರಿಸುತ್ತಿದೆ; ಗುಜರಾತ್ ಮಾಡೆಲ್ ಹೋಗಿಬಿಟ್ಟಿದೆ: ಸಚಿವ ಎನ್‌ಎಸ್ ಬೋಸರಾಜು
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಕುರಿತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಪ್ರಜಾಸ್ವಾಮ್ಯದ ವ್ಯವಸ್ಥೆಯನ್ನು ಹದಗೆಡಿಸಿದ್ದು ಬಿಜೆಪಿ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಆಡಳಿತ ನಡೆಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಮನೆಯಿಂದ ಹಣ ತಂದಿದ್ದಾರಾ?. ಇದನ್ನು ಜೋಶಿಯವರು ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.
ಬಿಜೆಪಿ ನಾಯಕರು ಇ.ಡಿ, ಸಿಬಿಐ, ಐಟಿ ಇಲಾಖೆಯನ್ನು ಹಿಡಿತದಲ್ಲಿಟ್ಟುಕೊಂಡು ರಾಜಕೀಯ ಆಟವಾಡುತ್ತಿದ್ದಾರೆ. ವಿರೋಧಿಗಳನ್ನು, ವಿರೋಧ ಪಕ್ಷಗಳನ್ನು ಟಾರ್ಗೆಟ್ ಇಟ್ಟುಕೊಂಡು ತುಳಿಯುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಎಂಪಿ ರೇಣುಕಾಚಾರ್ಯ ಸೇರಿ ಹಲವರು ಕೈ ನಾಯಕರ ಭೇಟಿ: ಸಚಿವ ಭೋಸರಾಜ್ ಸ್ಫೋಟಕ ಹೇಳಿಕೆ
ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ನಾವು ಬೆಂಬಲ ನೀಡಿದಾಗ ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಾಗದೆ ಅಮೆರಿಕಗೆ ಹೋಗಿ ಕುಳಿತುಕೊಂಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗೆಲ್ಲದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುವುದಾಗಿ ಹೇಳಿದ್ದರು. ಅವರು ತಮ್ಮ ಮಾತು ಉಳಿಸಿಕೊಂಡಿದ್ದಾರಾ?. ಮಾಜಿ ಪ್ರಧಾನಿ ದೇವೇಗೌಡರು ಪಕ್ಷ ಉಳಿಸಿಕೊಳ್ಳಲು ಬಿಜೆಪಿ ಜತೆ ಕೈಜೋಡಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಜನರು ಎಲ್ಲವನ್ನೂ ಅರಿತುಕೊಳ್ಳುತ್ತಾರೆ ಎಂದರು.