Asianet Suvarna News Asianet Suvarna News

ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ? ಇವತ್ತಿನವರೆಗೆ ಎಂದಾದರೂ ಸತ್ಯ ಹೇಳಿದ್ದಾರಾ ತೋರಿಸಿ. ಬರೀ ಹಿಟ್ ಅಂಡ್ ರನ್ ಮಾಡ್ತಾರೆ.  ಬರೀ ಹೊಟ್ಟೆಕಿಚ್ಚು, ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

We have no opposition to the construction of Ram Mandir says CM Siddaramaiah at mysuru rav
Author
First Published Nov 17, 2023, 3:23 PM IST

ಮೈಸೂರು (ನ.17): ಕುಮಾರಸ್ವಾಮಿ ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ? ಇವತ್ತಿನವರೆಗೆ ಎಂದಾದರೂ ಸತ್ಯ ಹೇಳಿದ್ದಾರಾ ತೋರಿಸಿ. ಬರೀ ಹಿಟ್ ಅಂಡ್ ರನ್ ಮಾಡ್ತಾರೆ.  ಬರೀ ಹೊಟ್ಟೆಕಿಚ್ಚು, ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು,  ನನ್ನ ಮಗನ ವಿಚಾರದಲ್ಲಿ ನಿನ್ನೆ ಸುಮ್ಮನೆ ಸುಳ್ಳು ಹಬ್ಬಿಸಿದ್ರು. ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾನೆ. ಅವನು ಮಾಜಿ ಶಾಸಕ ಅಲ್ವ. ಆಶ್ರಯ ಸಮಿತಿ ಅಧ್ಯಕ್ಷ ಕೂಡ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾ? ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿದ್ರೆ ಹೇಗೆ ಹೇಳಿ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಹೇಳೋದೆಲ್ಲ ಶೇ. 99 ಸುಳ್ಳು, ಜೆಡಿಎಸ್ ಸೆಕ್ಯುಲರ್ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆ ಕಾಂಗ್ರೆಸ್‌ಗೆ ಜಯ: 

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ. ಇಂದು ಮತದಾನ ನಡೆಯುತ್ತಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ, ರಾಜ್ಯಸ್ಥಾನ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತೆ. ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಈಗ ನವೆಂಬರ್‌ನಲ್ಲಿ ಇದ್ದೇವೆ.  ಲೋಕಸಭೆ ಚುನಾವಣೆಗೆ  ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ ಎಂದರು.

ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ: 

ಈಗ ರಾಮಮಂದಿರ ಹೊಸ ವಿಚಾರ ಅಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನ ಆಗಿದೆ. ತೀರ್ಪಿನಂತೆ ದೇವಾಲಯ ನಿರ್ಮಾಣ ಆಗಲಿದೆ. . ರಾಮಮಂದಿರದಿಂದ ಮತದಾರರು ಬದಲಾವಣೆ ಆಗುತ್ತಾರೆ ಅನ್ನೋದು ತಪ್ಪು. ದೇಶದ ಜನ ವಿವಿಧತೆಯಲ್ಲಿ ಏಕತೆ ಬಯಸುತ್ತಾರೆ. ಬ್ರಿಟೀಷರು, ಮೊಘಲರ ದಾಳಿಯ ನಂತರವೂ ದೇಶ ಒಂದಾಗಿದೆ. ಬೇರೆ ಬೇರೆ ದೇಶ, ಭಾಷೆ ಇದ್ದರೂ ಒಗ್ಗಟ್ಟು ಇದೆ.  ನಾವು ಒಳಗೊಳ್ಳುವಿಕೆಯಲ್ಲಿ  ನಂಬಿಕೆ ಇಟ್ಟುಕೊಂಡವರು ಎಂದರು. 

ತುಳು ಚಿತ್ರರಂಗದ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವಿ: ನಿರ್ಮಾಪಕರು

ನನ್ನ ಕಂಡ್ರೆ ಮೋದಿಗೆ ಭಯ: 

ಕರ್ನಾಟಕ, ಸಿದ್ದರಾಮಯ್ಯ ಬಗ್ಗೆ ಪ್ರಧಾನಿ ಮೋದಿಗೆ ಭಯ ಇದೆ. ಆದ್ದರಿಂದಲೇ ಎಲ್ಲ ಕಡೆ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಮೋದಿ ವಿರೋಧಿಸಿದ್ದರು. ಈಗ ಮೋದಿ ಅವರೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಇತ್ತೀಚೆಗೆ 'ವಿಕಸಿತ ಭಾರತ್ ಯಾತ್ರೆ' ಶುರು ಮಾಡಿದ್ದಾರೆ. ಅದರಲ್ಲಿ ಪ್ರಧಾನ ಮಂತ್ರಿಗಳ ಗ್ಯಾರಂಟಿ ಯೋಜನೆ ಅಂತ ಬೋರ್ಡ್ ಹಾಕಿದ್ದಾರೆ. ಪ್ರಧಾನಿ ಯಾರು ನರೇಂದ್ರ ಮೋದಿ ಅಲ್ವ ? ಇದನ್ನೇ ರಾಜಕೀಯ ಇಬ್ಬಂದಿತನ ಅನ್ನೋದು ಎಂದು ಪ್ರಧಾನಿ ವಿರುದ್ಧವೂ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Follow Us:
Download App:
  • android
  • ios