Asianet Suvarna News Asianet Suvarna News

ಅ.17ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

  • ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತ
  •   ಅಕ್ಟೋಬರ್ 17ರವರೆಗೂ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ
weather department alerts Heavy rain till  October 17  in karnataka snr
Author
Bengaluru, First Published Oct 15, 2021, 1:29 PM IST
  • Facebook
  • Twitter
  • Whatsapp

ಬೆಂಗಳೂರು (ಅ.15): ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಅಕ್ಟೋಬರ್ 17ರವರೆಗೂ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Weather Department) ಹೇಳಿದೆ.

ಬೆಂಗಳೂರು (Bengalur) ಸೇರಿದಂತೆ ರಾಜ್ಯದ  ಹಲವು ಜಿಲ್ಲೆಗಳಲ್ಲಿ  ವರುಣ ಆರ್ಭಟಿಸುತ್ತಿದ್ದು, ಅಕ್ಟೋಬರ್ 17ರವರೆಗೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು, ಚಿಕ್ಕಮಗಳೂರು (chikkamagaluru), ಹಾಸನ, ಮೈಸೂರು, ಕೊಡಗು,  ಶಿವಮೊಗ್ಗ (shivamogga), ತುಮಕೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಿದೆ.  ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 21 ರವರೆಗೆ ಮಳೆಯ ಸೂಚನೆ ನೀಡಿತ್ತು. ಇದೀಗ 17ವರೆಗೆ ಭಾರಿ ಮಳೆಯಾಗುವ ಬಗ್ಗೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ನೀಡಿದೆ. 

Bengaluru ನಿಲ್ಲದ ವರುಣನ ಆರ್ಭಟ, ಹೊಳೆಯಂತಾಗಿವೆ ರಸ್ತೆಗಳು, ವಾಹನ ಸವಾರರ ಪರದಾಟ

ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿಯುತ್ತಲೇ ಇದ್ದು ಬೆಳೆ ಹಾನಿ, ಕಷ್ಟ ನಷ್ಟಗಳು ಸಂಭವಿಸಿದೆ.  ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ತುಂಬಿವೆ.  ಅನ್ನದಾತರು ಭಾರಿ ಮಳೆಯಿಂದ ಸಂಕಷ್ಟ ಎದುರಿಸುವಂತಾಗಿದೆ. 

ಇನ್ನು ಬೆಂಗಳೂರು ನಗರದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ರಸ್ತೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೀರು ನಿಂತಿದ್ದು ಕೆರೆಯಂತಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ. 

ಬೆಂಗಳೂರು ನಗರದಲ್ಲಿ ಗುರುವಾರ ಮಧ್ಯರಾತ್ರಿ ಭಾರೀ ಪ್ರಮಾಣದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದೆ.  

ಬೆಂಗಳೂರಿಗೆ ಅಲರ್ಟ್

 

 ನಗರದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು  ಇನ್ನಷ್ಟು ದಿನ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ (Weather Department) ಎಚ್ಚರಿಕೆ ನೀಡಿದೆ. 

ಬೆಂಗಳೂರು (Bengaluru) ನಗರಕ್ಕೆ ಆರೆಂಜ್ ಅಲರ್ಟ್ (Orange Alert) ನೀಡಲಾಗಿದೆ.  ಬಂಗಾಳಕೊಲ್ಲಿ (Bay Of Bengal) ಅರಬ್ಬಿ ಸಮುದ್ರದಲ್ಲಿನ (Arabian Sea) ವಾಯುಭಾರ ಕುಸಿತ ಮೇಲ್ಮೈ ಸುಳಿಗಾಳಿ ಮತ್ತು ಕಡಿಮೆ ಒತ್ತಡಗಳ ಪ್ರಭಾವದಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ (Widespread rain) ಎಂದು ಹವಾಮಾನ ಇಲಾಖೆ  ತಿಳಿಸಿದೆ. 

ಮೈಸೂರು : 5 ದಿನ ಮಳೆಯ ಮುನ್ಸೂಚನೆ

 ಹಗಲಲ್ಲಿ ಒಂದೆರಡು ಬಾರಿ ಸಾಧಾರಣ ಮಳೆಯಾಗಿದ್ದರೆ, ರಾತ್ರಿ ಮಳೆ ಬಿರುಸು ಪಡೆದುಕೊಳ್ಳುತ್ತಿದೆ.  

Follow Us:
Download App:
  • android
  • ios