ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ವಾರಾಂತ್ಯದ ಪಾರ್ಟಿಯಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದ ವಿದೇಶಿ ಪ್ರಜೆಗಳಿಗೆ ಕೇಂದ್ರ ವಿಭಾಗದ ಪೊಲೀಸರು ಶನಿವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು (ಜೂ.19) ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ವಾರಾಂತ್ಯದ ಪಾರ್ಟಿಯಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದ ವಿದೇಶಿ ಪ್ರಜೆಗಳಿಗೆ ಕೇಂದ್ರ ವಿಭಾಗದ ಪೊಲೀಸರು ಶನಿವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಸಾಮಾನ್ಯವಾಗಿ ವಾರಾಂತ್ಯ ದಿನಗಳಲ್ಲಿ ನಗರದ ಎಂ.ಜಿ.ರಸ್ತೆ(MG Road), ಬ್ರಿಗೇಡ್ ರಸ್ತೆ, ಚಚ್‌ರ್ ಸ್ಟ್ರೀಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿದೇಶಿ ಪ್ರಜೆಗಳು, ವಿದ್ಯಾರ್ಥಿಗಳು ಸೇರಿದಂತೆ ದೇಶದ ನಾನಾ ಭಾಗಗಳ ಜನರು ಸೇರುತ್ತಾರೆ. ಇಲ್ಲಿನ ಪಬ್, ಬಾರ್‌ಗಳಲ್ಲಿ ಪಾರ್ಟಿ ಮಾಡಿ ಮೋಜು-ಮಸ್ತಿ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಇಬ್ಬರು ಎಸಿಪಿ, 6 ಮಂದಿ ಇನ್‌ಸ್ಪೆಕ್ಟರ್‌ಗಳು, 10 ಮಂದಿ ಪಿಎಸ್‌ಐಗಳು, 20 ಮಂದಿ ಮಹಿಳಾ ಸಿಬ್ಬಂದಿ, 20 ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಪೊಲೀಸರ ತಂಡ ಶನಿವಾರ ತಡರಾತ್ರಿ ನಗರದ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳ ಪಬ್-ಬಾರ್‌ಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿವೆ.
ಕುಡಿದ ಮತ್ತಿನಲ್ಲಿ ಯುವತಿಯರ ಇದೆಂಥಾ ಅವಸ್ಥೆ!.. ಎಂ.ಜಿ. ರಸ್ತೆಯಲ್ಲಿ ಹೈಡ್ರಾಮಾ..!
ಈ ವೇಳೆ 26 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆರು ಮಂದಿ ವಿದೇಶಿಗರು ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಇಬ್ಬರು ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೈದು ಹಾಗೂ ಶಾಂತಿ ಕದಡಿದ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರೊಂದಿಗೆ ವಿದೇಶಿ ಮಹಿಳೆಯರ ವಾಗ್ವಾದ
ಪೊಲೀಸರ ಕಾರ್ಯಾಚರಣೆ ವೇಳೆ ಪಾನಮತ್ತ ಆಫ್ರಿಕನ್ ಪ್ರಜೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದಾರೆ. ಈ ವೇಳೆ ಅವರನ್ನು ವಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲು ಮುಂದಾದಾಗ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೈಡ್ರಾಮವೇ ನಡೆದಿದೆ. ಅದರಲ್ಲೂ ವಿದೇಶಿ ಮಹಿಳೆಯರು ಪೊಲೀಸರ ಜತೆಗೆ ಕೆಲ ಕಾಲ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇನ್ನು ಕೆಲ ವಿದೇಶಿಗರು ಪೊಲೀಸರನ್ನು ಕಂಡು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಆದರೂ ಪೊಲೀಸರು ನಶೆಯಲ್ಲಿದ್ದ ವಿದೇಶಿಗರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.
ಕುಡಿದು ಟೈಟಾಗಿದ್ದ ಮಹಿಳೆಯನ್ನು ಫ್ಲ್ಯಾಟ್‌ಗೆ ಹೊತ್ತೊಯ್ದು ಅತ್ಯಾಚಾರವೆಸಗಿದ ಭಾರತೀಯ ಮೂಲದ ವಿದ್ಯಾರ್ಥಿ
