ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆ‌ರ್.ಕೃಷ್ಣಕುಮಾ‌ರ್ ಅವರ ಪೀಠ, ಈ ರೀತಿಯ ಆದೇಶ ಸೂಕ್ತವಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಈ ರೀತಿಯ ಆದೇಶ ಹೊರಡಿಸಲು ಯಾವ ಕಾನೂನು ಅವಕಾಶ ಕಲ್ಪಿಸಿದೆ ಎನ್ನುವುದನ್ನು ವಿವರಿಸುವಂತೆ ಸರ್ಕಾರಕ್ಕೆ ಸೂಚಿಸಿ, ಫೆ.14ಕ್ಕೆ ವಿಚಾರಣೆ ಮುಂದೂಡಿದೆ.

ಬೆಂಗಳೂರು(ಫೆ.14): ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿ ಸಲು ಅಧಿಕಾರ ಕಲ್ಪಿಸಿರುವ ಕಾನೂನಿನ ಬಗ್ಗೆ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಫೆ.1ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಎನ್.ಕಾಮತ್ ಸೇರಿ ಒಟ್ಟು ನಾಲ್ವರು ಹೈಕೋರ್ಟ್‌ಗೆ ತಕರಾರು ಸಲ್ಲಿಸಿದ್ದಾರೆ.

ಕೇರಳ ಸಿಎಂ ಪುತ್ರಿ ವೀಣಾ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆ‌ರ್.ಕೃಷ್ಣಕುಮಾ‌ರ್ ಅವರ ಪೀಠ, ಈ ರೀತಿಯ ಆದೇಶ ಸೂಕ್ತವಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಈ ರೀತಿಯ ಆದೇಶ ಹೊರಡಿಸಲು ಯಾವ ಕಾನೂನು ಅವಕಾಶ ಕಲ್ಪಿಸಿದೆ ಎನ್ನುವುದನ್ನು ವಿವರಿಸುವಂತೆ ಸರ್ಕಾರಕ್ಕೆ ಸೂಚಿಸಿ, ಫೆ.14ಕ್ಕೆ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸಾರ್ವತ್ರಿಕ ಚುನಾವಣೆಯಲ್ಲ. ಇದರಲ್ಲಿ ಕೇವಲ 16 ಸಾವಿರ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. ಹೀಗಾಗಿ, 48 ಗಂಟೆಗಳ ಅವಧಿಯವರೆಗೆ ಮದ್ಯ ಮಾರಾಟ ನಿಷೇಧಿಸಿದರೆವರ್ತಕರು, ಉದ್ದಿಮೆದಾರರು ಸಾಕಷ್ಟು ತೊಂದರೆ ಅನುಭವಿಸಲಿದ್ದಾರೆ ಎಂದು ವಿವರಿಸಿದರು. ಅಲ್ಲದೆ, ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು. ಅರ್ಜಿದಾರರು ಚಿಲ್ಲರೆ, ಸಗಟು ವ್ಯಾಪಾರ, ಹೋಟೆಲ್ ತೆರೆಯಲು ಅನುಮತಿ ಸುವಂತೆ ನಿರ್ದೇಶಿಸಬೇಕು ಎಂದು ಕೋರಿದರು.