ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ಹರ್ಮುಜ್ ಜಲಸಂಧಿ ಬಂದ್ ಆಗಿದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಎಂಬ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಗೆ ಡಿಸಿಎಂ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು

ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆ ಹರ್ಮುಜ್ ಜಲಸಂಧಿ ಬಂದ್ ಆಗಿದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಎಂಬ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಗೆ ಡಿಸಿಎಂ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಪ್ರಲ್ಹಾದ್ ಜೋಶಿ ಅವರು ರಾಜ್ಯದ ಹಿತಕ್ಕೆ ಸಹಾಯ ಮಾಡಬೇಕು. ಎರಡು ಹಡಗುಗಳು ಬಂದವು, ಎರಡೂ ಹಡಗುಗಳನ್ನು ಯಾಕೆ ಗುಜರಾತ್‌ಗೆ ಕಳಿಸಿದ್ರು, ಅವರು ಉತ್ತರ ಭಾರತ ಮಾತ್ರ ನೋಡ್ತಾರೆ, ದಕ್ಷಿಣ ಭಾರತ ನೋಡಲ್ಲ ಎಂದು ಡಿಕೆಶಿ ಆರೋಪಿಸಿದರು.

Add Asianetnews Kannada as a Preferred SourcegooglePreferred

ಎರಡು ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ:

ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಈ ಎರಡು ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ. ಶಿವಕುಮಾರ್, ಎರಡು ಉಪ‌ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿ ಪಡ್ತಿದ್ದಾರೆ ಎಂದರು.

ನಾಯಕತ್ವ ಬದಲಾವಣೆ ಬಗ್ಗೆ ನಿಮಗ್ಯಾಕೆ ಸಮಸ್ಯೆ..?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಾಯಕತ್ವ ಬದಲಾವಣೆ ಬಗ್ಗೆ ನಿಮಗ್ಯಾಕೆ ಸಮಸ್ಯೆ..? ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ. ಟೈಮ್ ಬರಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ

ಇದೇ ವೇಳೆ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರ್ತಾರೆ ಅನ್ನೋ ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ಕೇಳಿದಾಗ, ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ, ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು: ನಾರಾಯಣ ಹೃದಯಾಲಯದ ನರ್ಸ್‌ ಹೊಳೆಗೆ ಹಾರಿ ಸಾವಿಗೆ ಶರಣು

ಕೇರಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ. ಕಳೆದ ಹತ್ತು ವರ್ಷಗಳಲ್ಲಿ ಕೇರಳದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಬಿಜೆಪಿ ಜೊತೆ ಕೇರಳ ಸರ್ಕಾರ‌ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ವಾಂಚೋ ಬುಡಕಟ್ಟು: ಭಾರತದ ಈ ಸಮುದಾಯದಲ್ಲಿ ಮದುವೆಗೂ ಮೊದಲೇ ಯುವತಿ ಗರ್ಭಿಣಿ ಆದರಷ್ಟೇ ಮದುವೆ