ದರ್ಶನ್‌ಗೆ ಜಾಮೀನು ಸಿಗುತ್ತಾ?: ಇಂದು ಮಧ್ಯಾಹ್ನ ಹೈಕೋರ್ಟ್ ತೀರ್ಪು

ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ. 
 

Will Darshan get bail High Court verdict on dec 13th afternoon gvd

ಬೆಂಗಳೂರು (ಡಿ.13): ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ. ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ, ಮ್ಯಾನೇಜರ್ ಆರ್.ನಾಗರಾಜು, ದರ್ಶನ್ ಕಾರು ಚಾಲಕ ಎಂ.ಲಕ್ಷ್ಮಣ್, ಆಪ್ತರಾದ ಅನುಕುಮಾರ್, ಜಗದೀಶ್ ಮತ್ತು ಪ್ರದೋಷ್ ರಾವ್ ಅವರ ಜಾಮೀನು ಅರ್ಜಿಗಳ ಅರ್ಜಿಗಳ ವಿಚಾರಣೆಯನ್ನು ಸೋಮವಾರ (ಡಿ.9ರಂದು) ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ಶುಕ್ರವಾರ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸಲಿದೆ.

ಇದರಿಂದ ದರ್ಶನ್‌ಗೆ ಜೈಲೋ ಮತ್ತು ಬೈಲೋ ಎಂಬುದು ಶುಕ್ರವಾರ ಮಧ್ಯಾಹ್ನ ನಿರ್ಧಾರವಾಗಲಿದೆ. ದರ್ಶನ್ ಹಾಗೂ ಇತರೆ ಅರ್ಜಿದಾರರಿಗೆ ಜಾಮೀನು ನಿರಾಕರಿಸಿ ಕಳೆದ ಅ.14ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಎಲ್ಲಾ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಒಂದೊಮ್ಮೆ ದರ್ಶನ್ ಜಾಮೀನು ಅರ್ಜಿ ವಜಾಗೊಂಡರೆ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ನಂತರ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಜಾಮೀನು ದೊರೆತರೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಹೋಗಬಹುದು.

ದರ್ಶನ್‌ಗೆ ಆಪರೇಷನ್‌: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರನಟ ದರ್ಶನ್‌ಗೆ ಡಿ.11ರ ಬುಧವಾರ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ದರ್ಶನ್‌ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು ಹೈಕೋರ್ಟ್‌ಗೆ ಈ ವಿಷಯ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌.ನಾಗರಾಜು, ಎಂ.ಲಕ್ಷ್ಮಣ್, ಅನು ಕುಮಾರ್‌, ಜಗದೀಶ್‌, ಪ್ರದೋಶ್‌ ಎಸ್‌. ರಾವ್‌ ಸಲ್ಲಿಸಿರುವ ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

1991ರ ಪೂಜಾ ಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ: ಮಂದಿರ, ಮಸೀದಿ ಸರ್ವೇಗೆ ಸುಪ್ರೀಂ ತಡೆ

ವಿಚಾರಣೆ ವೇಳೆ ದರ್ಶನ್‌ಗೆ ನೀಡಲಾಗಿರುವ ಮಧ್ಯಂತರ ಜಾಮೀನು ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್‌, ಶಸ್ತ್ರಚಿಕಿತ್ಸೆಗೆ ಒಳಗಾಗಲು ಅ.30ರಂದು ಹೈಕೋರ್ಟ್‌ ದರ್ಶನ್‌ಗೆ ಆರು ವಾರ ಕಾಲ ಮಧ್ಯಂತರ ಜಾಮೀನು ನೀಡಿದೆ. ಆದರೆ, ಈವರೆಗೂ ದರ್ಶನ್‌ ಶಸ್ತ್ರ ಚಿಕಿತ್ಸೆ ಮಾಡಿಕೊಂಡಿಲ್ಲ. ಈ ನಡಾವಳಿ ಪರಿಗಣಿಸಿ ಅವರ ಮಧ್ಯಂತರ ಜಾಮೀನು ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ಆಗ ದರ್ಶನ್‌ ಪರ ವಕೀಲ ಹಿರಿಯ ಸಿ.ವಿ. ನಾಗೇಶ್‌ ಅವರು ಅಂತಿಮ ವೈದ್ಯಕೀಯ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿ, ದರ್ಶನ್‌ ಯಾವ ದಿನದಂದು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು ಎಂದು ನಿರ್ಧರಿಸಬೇಕಾದವರು ವೈದ್ಯರು. ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ದರ್ಶನ್‌ಗೆ ನಾವು ಒತ್ತಾಯ ಮಾಡಲಾಗದು. ಮೇಲಾಗಿ ದರ್ಶನ್‌ಗೆ ಡಿ.11ರಂದು ಬೆನ್ನುಹುರಿ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios