ಬೆಂಗಳೂರು(ಜು.14: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರ ಲಾಕ್‌ಡೌನ್‌ ಜಾರಿಗೊಳಿಸಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ವಾರದ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೋವಿಡ್‌ ಸಲಕರಣೆ ಬಾಡಿಗೆ ಪಡೆದಿದ್ದಕ್ಕೆ ಸಿಎಂ ಗರಂ!

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಎರಡು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ಒಂದು ವಾರ ಲಾಕ್‌ಡೌನ್‌ ಮಾಡಲಾಗಿದೆ. ಒಂದು ವಾರದಲ್ಲಿ ವ್ಯವಸ್ಥೆಯನ್ನು ಸರಿಪಡಿಸಿಕೊಂಡು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸೋಮವಾರ ಸಂಜೆ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಬಿಬಿಎಂಪಿ ನಂಬಿಕೊಂಡರೆ ನಗರದಲ್ಲಿ ಭೀಕರ ಸ್ಥಿತಿ ಸೃಷ್ಟಿ: ಹೈಕೋರ್ಟ್‌ ಕಿಡಿ

ಒಂದು ವಾರದ ಬಳಿಕ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಯಾವುದೇ ಕಾರಣಕ್ಕೂ ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.