ಬೆಂಗಳೂರು(ಅ.10): ‘ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರ, ಹಿರಿಯ ಅಧಿಕಾರಿಗಳ, ಎಲ್ಲ ಪಕ್ಷಗಳ ಮುಖಂಡರ ಸಭೆ ನಡೆಸಿ ಸಾಧಕ-ಭಾದಕ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ, ವದಂತಿಗಳಿಗೆ ಕಿವಿಗೊಡಬಾರದು’ ಎಂದು ಪೋಷಕರಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರ​ವಾರ ಮನವಿ ಮಾಡಿದ್ದಾರೆ.

"

‘ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿದ್ದೇನೆ. ಅಲ್ಲದೇ, ಈ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಮುನ್ನ ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ-ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವು​ದು​’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸರ್ಕಾರ ತೀರ್ಮಾನ ಕೈಗೊಳ್ಳುವವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಪೋಷಕರು ಕಿವಿಗೊಡಬಾರದು’ ಎಂದು ಕೋರಿದ್ದಾರೆ.