ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಣೆ?: ಮಹತ್ವದ ಸುಳಿವು
ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಣೆ?: ಮಹತ್ವದ ಸುಳಿವು| ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸಿಎಂ ನಿರ್ಣಯ
ಬೆಂಗಳೂರು(ಜು.12): ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಒಂದು ವಾರ ಲಾಕ್‌ಡೌನ್ ಘೋಷಣೆಯಾಗಿದೆ. ರಾಜ್ಯದ ಇತರ ಜಿಲ್ಲೆಗಳಿಗೂ ಈ ಲಾಕ್‌ಡೌನ್ ವಿಸ್ತರಿಸಬೇಕೇ ಬೇಡವೇ ಎಂಬ ಬಗ್ಗೆ ಮುಖ್ಯಮಂತ್ರಿಯವರು ಸೋಮವಾರ ಜಿಲ್ಲಾಧಿಕಾರಿಗಳ ಸಭೆಯ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ.
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್‌ಗೆ ಕೊರೋನಾ; ಆಸ್ಪತ್ರೆ ದಾಖಲು!
ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದಿದ್ದು, ವಿಡಿಯೋ ಸಂವಾದ ಮೂಲಕ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕೊರೋನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅನಂತರ ಲಾಕ್‌ಡೌನ್ ಅನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆ ಎಂಬ ಬಗ್ಗೆ ತೀರ್ಮಾನಿಸಲಿದ್ದಾರೆ.
ಹೀಗಾಗಿ, ಸೋಮವಾರದ ಸಭೆಯಲ್ಲಿ ಜಿಲ್ಲೆಯ ಸಮಗ್ರ ಮಾಹಿತಿಯೊಂದಿಗೆ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ಸೂಚನೆ ನೀಡಿದ್ದಾರೆ. ಸೋಮವಾರದ ಜಿಲ್ಲೆಯಲ್ಲಿನ ಪರಿಸ್ಥಿತಿ, ಕೊರೋನಾ ಸೋಂಕಿತರ ಸಂಖ್ಯೆ, ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಮಾಹಿತಿಗಳನ್ನು ಮುಖ್ಯಮಂತ್ರಿಗಳು ಪಡೆದುಕೊಳ್ಳಲಿದ್ದಾರೆ.
ಒಂದು ವಾರ ಬೆಂಗಳೂರು ಕಂಪ್ಲೀಟ್ ಲಾಕ್‌ಡೌನ್; ಸರ್ಕಾರದ ಅಧಿಕೃತ ಆದೇಶ
ಒಂದು ಮೂಲದ ಪ್ರಕಾರ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಲಾಕ್‌ಡೌನ್ ಅನ್ನು ಘೋಷಣೆ ಮಾಡುವುದು ಹಾಗೂ ತಮ್ಮ ಜಿಲ್ಲೆಗಳಲ್ಲಿ ಅದರ ಜಾರಿ ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬುದನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಬಿಡುವ ತೀರ್ಮಾನವನ್ನು ಸರ್ಕಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.