ಬೆಂಗಳೂರು(ಸೆ.07): ಸಾಲ ವಾಪಸ್‌ ಕೇಳಲು ಬಂದ ಬ್ಯಾಂಕ್‌ ಸಿಬ್ಬಂದಿಗೆ ಅತ್ಯಾಚಾರದ ಕೇಸ್‌ ಹಾಕುತ್ತೇನೆ ಎಂದು ಮಹಿಳೆ, ಅವಾಚ್ಯ ಶಬ್ದದಿಂದ ನಿಂದಿಸಿರುವ ವಿಡಿಯೋವೊಂದು ವೈರಲ್‌ ಆಗಿದೆ.

ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್‌ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್‌ ಸಿಬ್ಬಂದಿ ಮಹಿಳೆಯ ಮನೆಗೆ ಹೋಗಿದ್ದಾರೆ. ಈ ವೇಳೆ ಮಹಿಳೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್‌ ಹಾಕುತ್ತೇನೆ ಎಂದು ಅವಾಜ್‌ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮತ್ತಲ್ಲಿ ಸಿಎಂಗೆ ಝಾಡಿಸಿದ ವೈದ್ಯ, ಹಗ್ಗ ಕಟ್ಟಿ ಎಳೆದಾಡಿದ ಪೊಲೀಸರು

ಬ್ಯಾಂಕ್‌ ಸಿಬ್ಬಂದಿಯನ್ನು ತಾನೇ ಎಳೆದಾಡಿ ನಿನ್ನ ಮೇಲೆ ಅತ್ಯಾಚಾರ ಕೇಸ್‌ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿನ್ನ ಫೋಟೋವನ್ನು ಫೇಸ್‌ಬುಕ್‌ಗೆ ಹಾಕಿ ಅರೆಸ್ಟ್‌ ಮಾಡಿಸುತ್ತೇನೆ ಎಂದು ಅವಾಚ್ಯ ಶಬ್ಧದಿಂದ ನಿಂದಿಸಿದ್ದಾಳೆ. ಈ ವೇಳೆ ಸಿಬ್ಬಂದಿಯೊಬ್ಬರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬಿಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ. ಯಾವ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂಬುದು ಬಗ್ಗೆ ಖಾತ್ರಿಯಾಗಿಲ್ಲ.